More

    ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ

    ಬೆಂಗಳೂರು: ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಮುಸ್ಲಿಂ ಸಮುದಾಯದ ಯುವಕರಿಂದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ. ಘಟನೆಯ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ.

    ಇದನ್ನೂ ಓದಿ: ಬಾಯ್‌ಫ್ರೆಂಡ್‌ಗಿಂತ ಶ್ರೀಮಂತೆ ಸ್ಮೃತಿ ಮಂದಾನ: ಇವ್ರಿಗೆ ‘ಬಾಯ್ ಫ್ರೆಂಡ್’ ಇದಾನಾ ಎಂದ್ರು ಆರ್‌ಸಿಬಿ ಫ್ಯಾನ್ಸ್!

    ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಸುಲೇಮಾನ್, ಶಾನವಾಜ್, ರೋಹಿತ್, ದ್ಯಾನೀಶ್ ಮತ್ತು ತರುಣ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಮುಖೇಶ್ ಹಲ್ಲೆಗೊಳಗಾಗಿರುವ ಯುವಕ. ವರ್ಧಮಾನ್ ಟೆಲಿಕಾಮ್’ ಎಂಬ ಮೊಬೈಲ್ ಅಂಗಡಿ ನಡೆಸುತ್ತಿದ್ದ ಮುಖೇಶ್. ಸಂಜೆ ಸಮಯ ಮೊಬೈಲ್ ಶಾಪ್‌ನಲ್ಲಿ ಹನುಮಂತನ ಭಕ್ತಿಗೀತೆ ಹಾಡುಗಳನ್ನು ಹಾಕಿದ್ದ ಯುವಕ. ಈ ಸಮಯದಲ್ಲಿ ಅಂಗಡಿಗೆ ಬಂದಿದ್ದ ಮುಸ್ಲಿಂ ಸಮುದಾಯ ಯುವಕರು. ಸಂಜೆ ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕ್ತಿಯ ಅಂತಾ ಜಗಳ ತೆಗೆದಿದ್ದಾರೆ. ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯಿಂದ ಹೊರ ಎಳೆದು ಮುಖೇಶ್​ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ್ದಾರೆ. ನೆಲಕ್ಕೆ ಕೆಡವಿ ಕಾಲಿನಿಂದ ಒದ್ದು ಹಲ್ಲೆ ಮಾಡಿ ಹೋಗಿದ್ದಾರೆ.

    ಹಲ್ಲೆಗೊಳಗಾದ ಯುವಕ ಮುಕೇಶ್​ ಹೇಳಿದ್ದೇನು?: ಮೊಬೈಲ್​ ಅಂಗಡಿಯಲ್ಲಿ ಎಂದಿನಂತೆ ಸಂಜೆ ವೇಳೆ ಪೂಜೆ ಮಾಡುವ ಸಮಯದಲ್ಲಿ ಭಜನೆ ಹಾಡು ಹಾಕಿದ್ದೆ. ಈ ವೇಳೆ ಅಂಗಡಿಗೆ ಬಂದ ಯುವಕರು ನಮ್ಮ ಆಜಾನ್ ಟೈಂನಲ್ಲಿ ಯಾಕೆ ಹಾಡು ಹಾಕ್ತಾ ಇದ್ದೀಯಾ ಎಂದು ಪ್ರಶ್ನೆ ಮಾಡಿದರು. ನಂತರ ಹಲ್ಲೆಗೆ ಮುಂದಾದ್ರು, ಮೊದಲು ಸ್ಪೀಕರ್ ತೆಗೆದುಕೊಂಡು ನನ್ನ ತಲೆಗೆ ಹೊಡೆದ್ರು. ಇದೇ ತರ ಭಕ್ತಿ ಗೀತೆ ಹಾಕಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ರು. ಇಷ್ಟಕ್ಕೆ ಸುಮ್ಮನಾಗದೆ ಚಾಕುವಿನಿಂದ ಇರಿಯುವುದಾಗಿ ಬೆದರಿಕೆ ಹಾಕಿದ್ರು ಎಂದು ಹಲ್ಲೆಗೊಳಗಾದ ಯುವಕ ನೋವನ್ನು ವ್ಯಕ್ತಪಡಿಸದರು.

    ಎರಡು ತಿಂಗಳ ಹಿಂದೆ ಅಂಗಡಿ ಇಟ್ಟಿದ್ದೇನೆ. ಮೊದಲಿನಿಂದಲೂ ರೋಲ್ ಕಾಲ್ ಮಾಡೋದು ಹಣ ಕೀಳಲು ಗದರಿಸುವ ಪ್ರಯತ್ನ ಮಾಡ್ತಿದ್ರು. ಒಟ್ಟು ಆರು ಜನ‌ ಬಂದಿದ್ರು ಸದ್ಯ ಪೊಲೀಸರಿಗೆ ದೂರು ಕೊಟ್ಟಿದ್ದೇನೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತಕ್ಕ ಶಿಕ್ಷೆ ಆಗಬೇಕು ಎಂದು ಹೇಳಿದರು. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಸೆಂಟ್ರಲ್ ತಿಳಿಸಿದ್ದಾರೆ.

    ಬಾಯ್‌ಫ್ರೆಂಡ್‌ಗಿಂತ ಶ್ರೀಮಂತೆ ಸ್ಮೃತಿ ಮಂದಾನ: ಇವ್ರಿಗೆ ‘ಬಾಯ್ ಫ್ರೆಂಡ್’ ಇದಾನಾ ಎಂದ್ರು ಆರ್‌ಸಿಬಿ ಫ್ಯಾನ್ಸ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts