More

    ಪ್ರಸಿದ್ಧ ಸ್ಟೆಡಿಯಂಗಳು ಹಾಗೂ ಆಶ್ರಮವೀಗ ಕರೊನಾ ಚಿಕಿತ್ಸಾ ಕೇಂದ್ರ

    ಬೆಂಗಳೂರು: ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರಸಿದ್ಧ ಕ್ರೀಡಾಂಗಣಗಳು ಹಾಗೂ ಒಂದು ಆಶ್ರಮವನ್ನು ಕರೊನಾ ಚಿಕಿತ್ಸಾ ಕೇಂದ್ರವನ್ನಾಗಿ ಬಳಸುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.

    ಕಂಠೀರವ ಸ್ಟೇಡಿಯಂ, ಕೋರಮಂಗಳ ಒಳಾಂಗಣ ಕ್ರೀಡಾಂಗಣ ಮತ್ತು ಶ್ರೀ ಶ್ರೀ ರವಿಶಂಕರ್​ ಗುರೂಜಿ ಆಶ್ರಮಗಳನ್ನು ಕರೊನಾ ಗುಣಲಕ್ಷಣ ಇಲ್ಲದ ಸೋಂಕಿತರ ಆರೈಕೆ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ.

    ಶೇ.75ರಷ್ಟು ಸೋಂಕಿತರದಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಇರುವುದಿಲ್ಲ. ಇಂಥವರಿಗೆ ಚಿಕಿತ್ಸೆ ಮತ್ತು ಆರೈಕೆ ನೀಡುವ ಸಂಬಂಧ ಈ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಈ ನಿಟ್ಟಿನಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸರ್ಕಾರ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದೆ.

    ಇಷ್ಟು ದಿನಗಳವರೆಗೆ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಾಗಿರುವ ವಿಕ್ಟೋರಿಯಾದಲ್ಲಿ ಕರೊನಾ ಸೋಂಕಿತನ್ನು ಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ. ರೋಗಲಕ್ಷಣಗಳ ತೀವ್ರತೆಯನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ರೀತಿಯ ಕರೊನಾ ಸೋಂಕಿತರನ್ನು ಇಲ್ಲಿ ಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ. ಇದರ ಜತೆಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಜಿಲ್ಲಾಡಳಿತವು ಗೊತ್ತುಪಡಿಸಿದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಇದನ್ನೂ ಓದಿ: ಪೊಲೀಸರಿಗೆ ಕಾಡುತ್ತಿರುವ ಕರೊನಾ; ಕಟ್ಟುನಿಟ್ಟಿನ ಕ್ರಮ ಸೂಚಿಸಿದ ಪೊಲೀಸ್​ ಆಯುಕ್ತರು…

    ಆದರೆ ಕಳೆದ ಎರಡು ದಿನಗಳಲ್ಲಿ ಆಗಿರುವ ಮಹತ್ತರ ಬೆಳವಣಿಗೆಯ ಹಿನ್ನೆಲೆಯಲ್ಲಿ ಸರ್ಕಾರ ಇಂಥದ್ದೊಂದು ಕ್ರಮಕ್ಕೆ ಮುಂದಾಗಿದೆ. ಅದೇನೆಂದರೆ ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ 232 ಕರೊನಾ ಕೇಸ್​ಗಳು ದಾಖಲಾಗಿವೆ. ಆದರೆ ಇವುಗಳ ಪೈಕಿ 102 ಮಂದಿಗೆ ಯಾವುದೇ ಪ್ರಯಾಣದ ಹಿನ್ನೆಲೆಯಾಗಲೀ ಸೋಂಕಿತರ ಸಂಪರ್ಕವಾಗಲಿ ಇಲ್ಲ. ಆದರೆ ಆಸ್ಪತ್ರೆಗೆ ದಾಖಲಾದ ನಂತರ ಇವರಿಗೆ ತೀವ್ರ ಉಸಿರಾಟದ ತೊಂದರೆ ಹಾಗೂ ಸೋಂಕು ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ. ಆದ್ದರಿಂದ ಇಂಥವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ಕೊಡಿಸುವ ಅಗತ್ಯವಿದೆ ಎಂದು ಸರ್ಕಾರ ಇದೀಗ ಮನಗಂಡಿದೆ.

    ರೋಗಲಕ್ಷಣವಿಲ್ಲದ ರೋಗಿಗಳಿಗೆ ಈ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ; ಸೌಮ್ಯ ಮತ್ತು ಮಧ್ಯಮ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳನ್ನು ಡೆಡಿಕೇಟೆಡ್ ಕೋವಿಡ್ ಆರೋಗ್ಯ ಕೇಂದ್ರಗಳಲ್ಲಿ (ಡಿಸಿಎಚ್‌ಸಿ) ಚಿಕಿತ್ಸೆ ಕೊಟ್ಟರೆ, ಗಂಭೀರವಾಗಿರುವ ರೋಗಿಗಳಿಗೆ ಡೆಡಿಕೇಟೆಡ್ ಕೋವಿಡ್ ಆಸ್ಪತ್ರೆಗಳಲ್ಲಿ (ಡಿಸಿಎಚ್) ಚಿಕಿತ್ಸೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಬೆಂಗಳೂರು ಮತ್ತು ಸುತ್ತಮುತ್ತಲಿನ 16 ಸರ್ಕಾರಿ ಆಸ್ಪತ್ರೆಗಳನ್ನು ರಾಜ್ಯ ಆರೋಗ್ಯ ಇಲಾಖೆ ಗುರುತಿಸಿದೆ, ಅಲ್ಲಿ ಸೌಮ್ಯ ಮತ್ತು ಮಧ್ಯಮ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಹಾಸಿಗೆಗಳನ್ನು ನಿಗದಿಪಡಿಸಲಾಗಿದೆ.

    ಆಸ್ಪತ್ರೆಗಳ ಸಂಪೂರ್ಣ ಮಾಹಿತಿಗಾಗಿ ಸರ್ಕಾರದ ವೆಬ್​ಸೈಟ್​ www.arogya.karnataka.gov.in ಕ್ಲಿಕ್ಕಿಸಿ.

    ಬಂಧಿಸುವ ಮುನ್ನ ಆರೋಪಿಗಳ ಸ್ನಾನ ಕಡ್ಡಾಯ: ಪೊಲೀಸರಿಗೆ ಕಮಿಷನರ್ ಕಟ್ಟಪ್ಪಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts