

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತಪಟ್ಟ ಹಿನ್ನೆಲೆ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಫ್ರಾಂಚೈಸಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ(FIR)ದಾಖಲಾಗಿದೆ.
ಆರ್‌ಸಿಬಿ ಫ್ರಾಂಚೈಸಿ ಸೇರಿ ಡಿಎನ್‌ಎ (ಈವೆಂಟ್ ಮ್ಯಾನೇಜರ್), ಕೆಎಸ್‌ಸಿಎ ಆಡಳಿತ ಸಮಿತಿ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾಲ್ತುಳಿತ ಘಟನೆಯಲ್ಲಿ ಕ್ರಿಮಿನಲ್ ನಿರ್ಲಕ್ಷ್ಯವನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ 2025ರ ವಿಜಯೋತ್ಸವದ ಹಿನ್ನೆಲೆ ಕಾಲ್ತುಳಿತ ಸಂಭವಿಸಿದ್ದರಿಂದ ಬೆಂಗಳೂರಿನಲ್ಲಿ ಸಂಭ್ರಮಾಚರಣೆಯ ವಾತಾವರಣ ದುರಂತಮಯವಾಗಿದೆ. (ಏಜೆನ್ಸೀಸ್)