24.9 C
Bangalore
Wednesday, December 11, 2019

ಮೆಟ್ರೋದಲ್ಲಿ ಭಯ ಹುಟ್ಟಿಸಿದ ಶಂಕಾಸ್ಪದ ವ್ಯಕ್ತಿ

Latest News

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ಬೆಂಗಳೂರು: ಶ್ರೀಲಂಕಾ ಸರಣಿ ಬಾಂಬ್ ಸ್ಪೋಟದ ಉಗ್ರರು ಸಿಲಿಕಾನ್ ಸಿಟಿಗೂ ಬಂದಿರುವ ವದಂತಿ ನಡುವೆ ಸೋಮವಾರ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ವ್ಯಕ್ತಿ ಕಾಣಿಸಿಕೊಂಡಿದ್ದಾನೆ. ಪೊಲೀಸರು ಶಂಕಾಸ್ಪದ ವ್ಯಕ್ತಿಯ ಪತ್ತೆಹಚ್ಚಲು ಬೆನ್ನತ್ತಿದ್ದು, ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಪೂರ್ವ ದ್ವಾರದ ಮೂಲಕ ಪ್ರವೇಶಿಸಿದ ಅಪರಿಚಿತ ವ್ಯಕ್ತಿ, ಮೆಟಲ್ ಡಿಟೆಕ್ಟರ್​ನಲ್ಲಿ ತಪಾಸಣೆಗೆ ಒಳಪಟ್ಟ ಹೊರಗೆ ಹೋಗಿದ್ದಾನೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಅಪರಿಚಿತ ವ್ಯಕ್ತಿ ಪತ್ತೆಗೆ ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಆತ ನಿಲ್ದಾಣ ಪ್ರವೇಶಿಸಲು ಯತ್ನಿಸಿದ್ದ ದೃಶ್ಯ ಮೆಟ್ರೋ ನಿಲ್ದಾಣ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸೋಮವಾರ ರಾತ್ರಿ 7.40ರಲ್ಲಿ ಅರಬ್ ಶೈಲಿಯ ವಸ್ತ್ರ ಧರಿಸಿ, ತಲೆ ಮೇಲೆ ಸ್ಕಾರ್ಫ್ ಹಾಕಿಕೊಂಡು ಬಂದಿದ್ದ ಆತ, ಡೋರ್ ಫ್ರೇಮ್ ಮೆಟಲ್ ಡಿಟೆಕ್ಟರ್ (ಡಿಎಫ್​ಎಂಡಿ) ಮೂಲಕ ಒಳಪ್ರವೇಶಿಸಿದಾಗ ಕೆಂಪು ಲೈಟ್ ಸಹಿತ ಸದ್ದು ಕೇಳಿಸಿದೆ. ಖಾಸಗಿ ಸೆಕ್ಯೂರಿಟಿ ಗಾರ್ಡ್ ಮಹೇಶ್, ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್​ನಲ್ಲಿ ತಪಾಸಣೆ ಮಾಡಿದಾಗ ಸದ್ದು ಕೇಳಿಸಿತ್ತು. ಹೀಗಾಗಿ, ಪ್ರಶ್ನೆ ಮಾಡಿದಾಗ ಆತ ಪೈಜಾಮಾ ಮತ್ತು ಕೈ ಸ್ವಲ್ಪ ಮೇಲಕ್ಕೆ ಎತ್ತಿದ್ದಾನೆ. ನಂತರ ಒಂದೆರೆಡು ಸೆಕೆಂಡ್​ಗಳಲ್ಲಿ ಗಾರ್ಡ್​ನನ್ನು ಯಾಮಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಪೊಲೀಸರಿಗೆ ಮಾಹಿತಿ: ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರದಿಂದ ಹಿಡಿದು ಎಲ್ಲ ಮೂಲೆಗಳಲ್ಲಿ ಇರುವ ಸಿಸಿ ಕ್ಯಾಮರಾಗಳ ವಿಡಿಯೋ ವೀಕ್ಷಣೆ ನಡೆಸುತ್ತಿದ್ದ ಮೇಲ್ವಿಚಾರಕರು ಇದನ್ನು ಗಮನಿಸಿದ್ದರು. ಅಪರಿಚಿತ ವ್ಯಕ್ತಿ ತಪಾಸಣೆಗೆ ಒಳಪಟ್ಟು ಹೊರಗೆ ಹೋಗುತ್ತಿರುವುದನ್ನು ಗಮನಿಸಿದ ಮೇಲ್ವಿಚಾರಕ ಓಂಶ್ಯಾಮ್ ಅನುಮಾನ ಗೊಂಡು ಉಪ್ಪಾರಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ತೆರಳಿದ ಎಸಿಪಿ ಮತ್ತು ಇನ್​ಸ್ಪೆಕ್ಟರ್ ನೇತೃತ್ವದ ತಂಡ ಸಿಸಿ ಕ್ಯಾಮರಾ ವಿಡಿಯೋ ಪರಿಶೀಲನೆ ನಡೆಸಿದೆ.

ಸುತ್ತಲಿನ ಪ್ರದೇಶಗಳಲ್ಲಿ ಅಪರಿಚಿತನಿಗಾಗಿ ಶೋಧ ಆರಂಭಿಸಲಾಗಿತ್ತು. ಮೆಜೆಸ್ಟಿಕ್ ಸುತ್ತಲಿನ ಲಾಡ್ಜ್​ಗಳು, ಕೆಎಸ್​ಆರ್​ಟಿಸಿ, ಬಿಎಂಟಿಸಿ, ರೈಲು ನಿಲ್ದಾಣಗಳಲ್ಲಿ ಹುಡುಕಾಟ ನಡೆಸಲಾಗಿದ್ದು, ಪತ್ತೆಯಾಗಿಲ್ಲ. ಈ ಕುರಿತು ಮಂಗಳವಾರ ಸಂಜೆ ಸುದ್ದಿಗಾರರ ಜತೆ ಮಾತನಾಡಿದ ಪಶ್ಚಿಮ ವಿಭಾಗ ಡಿಸಿಪಿ ರವಿ ಡಿ. ಚೆನ್ನಣ್ಣನವರ್, ‘ಮೆಟ್ರೋ ಸೆಕ್ಯುರಿಟಿ ಮೇಲ್ವಿಚಾರಕ ಕೊಟ್ಟ ಮಾಹಿತಿ ಆಧರಿಸಿ ವಿಡಿಯೋ ಪರಿಶೀಲನೆ ನಡೆಸಲಾಗಿದೆ. ನಿಲ್ದಾಣದ ಒಳಗೆ ಬರುತ್ತಿದ್ದ ವ್ಯಕ್ತಿ ವಾಪಸ್ ಹೋಗಿದ್ದು ಏಕೆ ಎಂದು ಗೊತ್ತಾಗಿಲ್ಲ. ಆತನಿಗಾಗಿ ಎಲ್ಲೆಡೆ ಶೋಧ ನಡೆಸಲಾಗಿದೆ ಎಂದು ತಿಳಿಸಿದರು. ಈಗಾಗಲೇ ಶ್ರೀಲಂಕಾ ಸ್ಪೋಟದ ಬಳಿಕ ಡಿಜಿಪಿ ನೀಲಮಣಿ ಎನ್. ರಾಜು ಮತ್ತು ಪೊಲೀಸ್ ಕಮಿಷನರ್ ಟಿ. ಸುನೀಲ್​ಕುಮಾರ್ ಸೂಚನೆ ಮೇರೆಗೆ ಎಲ್ಲೆಡೆ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ. ಅಪರಿಚಿತ ವ್ಯಕ್ತಿಯ ಪತ್ತೆಗಾಗಿ ವಿಶೇಷ ತಂಡ ಕಾರ್ಯಾಚರಣೆ ಮುಂದುವರಿಸಿದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ವದಂತಿಗಳಿಗೆ ಕಿವಿ ಕೊಡಬಾರದು. ಅನುಮಾನಾಸ್ಪದ ವ್ಯಕ್ತಿ ಮತ್ತು ವಸ್ತು ಕಂಡು ಬಂದರೆ ನಮ್ಮ-100ಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಡಿಸಿಪಿ ಮನವಿ ಮಾಡಿದರು.

ಅಪಾಯಕಾರಿ ವಸ್ತು ಇರಲಿಲ್ಲ

ಡೋರ್ ಮೆಟೆಲ್ ಡಿಕ್ಟೆಟರ್​ನಲ್ಲಿ ಸಾಮಾನ್ಯವಾಗಿ ಹಾದು ಹೋದಾಗ ಜೇಬಿನಲ್ಲಿ ಕೀಲಿ, ಮೊಬೈಲ್, ಬೆಲ್ಟ್ ಪ್ಯಾಡ್ ಇದ್ದರೆ ಕಮ್ಮಿ ಸದ್ದು ಬರುತ್ತದೆ. ಒಂದು ವೇಳೆ ಗನ್, ಸ್ಪೋಟದ ವಸ್ತುಗಳು ಸೇರಿ ಅಪಾಯಕಾರಿ ವಸ್ತುಗಳು ಇದ್ದಾಗ ಶಬ್ದ ಹೆಚ್ಚಾಗುತ್ತದೆ. ಅನುಮಾನಾಸ್ಪದ ವ್ಯಕ್ತಿಯ ತಪಾಸಣೆ ನಡೆಸಿದಾಗ ಅಪಾಯಕಾರಿ ವಸ್ತುಗಳು ಕಂಡುಬಂದಿಲ್ಲ. ಸಾಮಾನ್ಯ ಶಬ್ದಕ್ಕಿಂತ ಸ್ವಲ್ಪ ಹೆಚ್ಚು ಬಂದ ಕಾರಣಕ್ಕೆ ಸೆಕ್ಯೂರಿಟಿ ಗಾರ್ಡ್ ಆತನನ್ನು ಪಕ್ಕಕ್ಕೆ ಕರೆದು ಹ್ಯಾಂಡ್ ಡಿಕ್ಟೆಟರ್​ನಲ್ಲಿ ತಪಾಸಣೆ ನಡೆಸಿದ್ದಾರೆ. ಗನ್ ಅಥವಾ ಮತ್ಯಾವುದೇ ಅಪಾಯಕಾರಿ ವಸ್ತುಗಳು ಕಂಡುಬಂದಿಲ್ಲ. ಆದರೆ, ಆತ ವಾಪಸ್ ಏಕೆ ಹೋಗಿದ್ದಾನೆ ಎಂಬುದು ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ.

ವಾಪಸ್ ಏಕೆ ಹೋದ?

ಮೆಟ್ರೋ ನಿಲ್ದಾಣದ ಡೋರ್ ಮೆಟಲ್ ಡಿಟೆಕ್ಟರ್ ಒಳಗೆ ತಪಾಸಣೆಗೊಂಡು ಸೆಕ್ಯೂರಿಟಿ ಗಾರ್ಡ್ ಪ್ರಶ್ನಿಸಿದಾಗ ವಾಪಸ್ ಏಕೆ ಹೋದ ಎಂಬುದು ಯಕ್ಷಪ್ರಶ್ನೆಯಾಗಿದೆ. ಆಗಂತಕನೇ ಆಗಿದ್ದರೆ ಮೆಟಲ್ ಡಿಟೆಕ್ಟರ್​ಗೆ ಬಂದು ಸೆಕ್ಯೂರಿಟಿ ಗಾರ್ಡ್​ಗೆ ಏಕೇ ಸಿಕ್ಕಿಬೀಳುತ್ತಾನೆ ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ಸೆಕ್ಯೂರಿಟಿ ಗಾರ್ಡ್ ತೀವ್ರ ತಪಾಸಣೆ ನಡೆಸಿದಾಗ ಏಕೆ ಯಾಮಾರಿಸಿ ವಾಪಸ್ ಹೋದ. ತಪಾಸಣೆಗೆ ಒಳಪಟ್ಟು ಮೆಟ್ರೋ ಪ್ರಯಾಣ ಮಾಡಬಹುದಾಗಿತ್ತು. ಈ ಎಲ್ಲ ಅನುಮಾನಗಳನ್ನು ಹುಟ್ಟು ಹಾಕಿದ ಆ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಮೆಟ್ರೋ ಸೆಕ್ಯೂರಿಟಿ ವೈಫಲ್ಯ

ಅನುಮಾನಾಸ್ಪದ ವ್ಯಕ್ತಿಯ ಪ್ರಕರಣದಲ್ಲಿ ಮೆಟ್ರೋ ಸೆಕ್ಯೂರಿಟಿ ವೈಫಲ್ಯ ಎದ್ದು ಕಾಣುತ್ತಿದೆ. ಅಪರಿಚಿತ ವ್ಯಕ್ತಿಯನ್ನು ತಪಾಸಣೆ ನಡೆಸಿದ ಸೆಕ್ಯೂರಿಟಿ ಗಾರ್ಡ್ ಮಹೇಶ್, ಅನುಮಾನ ಬಂದ ಮೇಲೆ ಆತನನ್ನು ಪ್ರತ್ಯೇಕವಾಗಿ ತಪಾಸಣೆ ನಡೆಸಿ ಅನುಮಾನ ಬಗೆಹರಿಸಿಕೊಳ್ಳಬೇಕಿತ್ತು. ಇಲ್ಲ, ಮೇಲಾಧಿಕಾರಿ ಗಮನಕ್ಕೆ ತರಬೇಕಿತ್ತು. ಇದ್ಯಾವುದನ್ನು ಮಾಡದೆ ಆತ ತಪ್ಪಿಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾನೆ. ಸೆಕ್ಯೂರಿಟಿ ಗಾರ್ಡ್ ಕೈಯಿಂದ ತಪ್ಪಿಸಿಕೊಂಡ ಅಪರಿಚಿತ ವ್ಯಕ್ತಿ, ಹಿಂದಿರುಗಿ ಭದ್ರತಾ ಸಿಬ್ಬಂದಿಯನ್ನು ನೋಡಿಕೊಂಡು ಮರೆಯಾಗುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ನಗರದಲ್ಲಿ ಉಗ್ರರ ಭೀತಿ ಕುರಿತು ಎಲ್ಲೆಡೆ ಪ್ರಚಾರ ಮತ್ತು ಭದ್ರತೆ ಹೆಚ್ಚಿಸಿದ ಬಗ್ಗೆ ಅರಿವು ಇದ್ದರೂ ಜವಾಬ್ದಾರಿಯುತ ಸೆಕ್ಯೂರಿಟಿ ಗಾರ್ಡ್, ಕರ್ತವ್ಯದಲ್ಲಿ ಲೋಪ ಎಸಗಿರುವುದು ಕಂಡುಬಂದಿದೆ. ಅಪರಿಚಿತ ವ್ಯಕ್ತಿಯನ್ನು ತೀವ್ರ ತಪಾಸಣೆ ನಡೆಸಿ ಅನುಮಾನ ಬಗೆಹರಿಸಿಕೊಂಡಿದ್ದರೆ ಗೊಂದಲ ಉಂಟಾಗುತ್ತಿರಲಿಲ್ಲ ಎಂದು ಕೇಂದ್ರ ಗುಪ್ತಚರ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶ್ರೀಲಂಕಾ ಘಟನೆ ಯಿಂದ ಮುನ್ನೆಚ್ಚರಿಕೆ

ಬೆಂಗಳೂರು: ಶ್ರೀಲಂಕಾ ಬಾಂಬ್ ಸ್ಫೋಟ ರೂವಾರಿಗಳು ಬೆಂಗಳೂರಿಗೆ ಬಂದಿದ್ದರೆಂಬ ವಿಚಾರ ಅತ್ಯಂತ ಸೂಕ್ಷ್ಮವಾಗಿದ್ದು, ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಉಗ್ರರಿಗೆ ಸಂಬಂಧಿಸಿದಂತೆ ಲಭ್ಯವಾಗುವ ಮಾಹಿತಿಯಲ್ಲಿ ಕೆಲವೊಂದು ಸತ್ಯ ಇದ್ದರೆ, ಮತ್ತೆ ಕೆಲವು ಸುಳ್ಳು ಇರುತ್ತವೆ. ಆದರೆ ಯಾವುದೇ ಮಾಹಿತಿಯನ್ನು ನಿರ್ಲಕ್ಷ್ಯ ಮಾಡದಂತೆ ಸೂಚನೆ ನೀಡಿದ್ದೇನೆ ಎಂದರು. ಇಂತಹ ವಿಚಾರದಲ್ಲಿ ಕೇಂದ್ರ ಸರ್ಕಾರದ ಪಾಲು ಹೆಚ್ಚಿದೆ. ಕೇಂದ್ರ ಸರ್ಕಾರದ ಸೂಚನೆಗಳನ್ನು ನಾವು ಪಾಲನೆ ಮಾಡ್ತೀವಿ. ರಾಜ್ಯ ಸರ್ಕಾರ ಅಗತ್ಯ ಭದ್ರತೆಯನ್ನು ಕೈಗೊಂಡಿದೆ ಎಂದರು.

ತಪಾಸಣೆಗೆ ಒಳಪಟ್ಟ ಬಳಿಕ ಹೊರಗೆ ತೆರಳಿದ ಅಪರಿಚಿತ ವ್ಯಕ್ತಿಗಾಗಿ ಶೋಧ ಮುಂದುವರಿ ದಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ. ವದಂತಿಗಳಿಗೆ ಅವಕಾಶ ಕೊಡಬೇಡಿ.

| ರವಿ ಡಿ. ಚೆನ್ನಣ್ಣನವರ್, ಡಿಸಿಪಿ ಪಶ್ಚಿಮ ವಿಭಾಗ

ಶ್ರೀಲಂಕಾದ ಬಾಂಬ್ ಸ್ಪೋಟದ ರೂವಾರಿಗಳು ಬೆಂಗಳೂರಿಗೆ ಬಂದಿದ್ದರೆಂಬ ವಿಚಾರ ಅತ್ಯಂತ ಸೂಕ್ಷ್ಮವಾಗಿದ್ದು, ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಉಗ್ರರಿಗೆ ಸಂಬಂಧಿಸಿದ ಯಾವುದೇ ಮಾಹಿತಿ ನಿರ್ಲಕ್ಷಿಸದಂತೆ ಸೂಚನೆ ನೀಡಿದ್ದೇನೆ.

| ಎಂ.ಬಿ. ಪಾಟೀಲ್ ಗೃಹ ಸಚಿವ

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...