More

    ಭಾರೀ ಮಳೆಗೆ ಕೆರೆಯಂತಾದ ಹೊಸೂರು ಹೆದ್ದಾರಿ ತೆರವು: ಟ್ರಾಫಿಕ್​ ಪೊಲೀಸರಿಗೆ ಸವಾರರ ಬಹುಪರಾಕ್​

    ಬೆಂಗಳೂರು: ನಿನ್ನೆ (ಮೇ. 3) ರಾತ್ರಿ ಸುರಿದ ಭಾರೀ ಮಳೆಗೆ ಕೆರೆಯಂತಾಗಿದ್ದ ಹೊಸೂರು ಹೆದ್ದಾರಿಯಲ್ಲಿ ಮಳೆ ನೀರನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸಂಚಾರಿ ಪೊಲೀಸರಿಗೆ ಜನಸಾಮಾನ್ಯರು ಬಹುಪರಾಕ್ ಹೇಳಿದ್ದಾರೆ. ​

    Hosuru Road Rain

    ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ನಗರದ ಹಲವೆಡೆ ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಹೊಸೂರು ಹೆದ್ದಾರಿಗೆ ಮಳೆ ನೀರು ನುಗ್ಗಿ ವಾಹನ ಸವಾರರ ಪರದಾಡುವಂತಾಯಿತು. ಹೊಸೂರು ರಸ್ತೆ ಜಲಾವೃತಗೊಂಡಿದ್ದರಿಂದ ಹತ್ತಾರು ಕಿ.ಮೀ ದೂರ ಟ್ರಾಫಿಕ್ ಜಾಮ್​ ಆಗಿ, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    Hosuru Road Rain

    ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ

    ಎಲೆಕ್ಟ್ರಾನಿಕ್ ಸಿಟಿಯಿಂದ ಬೊಮ್ಮಸಂದ್ರದವರೆಗೆ ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದರು. ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರ ಸಿಗ್ನಲ್ ಬಳಿ ಜಲಾವೃತಗೊಂಡಿತ್ತು. ಪ್ರತಿ ಬಾರಿ ಮಳೆಯಾದಾಗಲೆಲ್ಲ ವೀರಸಂದ್ರ ಸಿಗ್ನಲ್ ಬಳಿ ಹೆದ್ದಾರಿ ಜಲಾವೃತಗೊಳ್ಳುತ್ತದೆ. ಆದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

    ಇದನ್ನೂ ಓದಿ: ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ!

    Hosuru Road Rain

    ಟ್ರಾಫಿಕ್​ ಪೊಲೀಸರಿಗೆ ಬಹುಪರಾಕ್​

    ಹೆದ್ದಾರಿಯಲ್ಲಿ ನೀರು ತುಂಬಿ ಕೆಸರು ಗದ್ದೆಯಂತಾಗಿದ್ದ ರಸ್ತೆಯಲ್ಲಿ ಮಳೆ ನೀರನ್ನು ತೆರವು ಮಾಡುವ ಮೂಲಕ ಟ್ರಾಫಿಕ್ ಪೋಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ರಸ್ತೆಯಲ್ಲಿ ಪೊಲೀಸರು ಕೆಲಸ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಗುರಿ ಇರಲಿ… ರಾಜ್ಯ ಚುನಾವಣೆಯನ್ನು ಮಹಾಭಾರತಕ್ಕೆ ಹೋಲಿಸಿದ ಪ್ರಿಯಾಂಕಾ ಗಾಂಧಿ

    ಚಿತ್ತಾಪುರ ತಹಸೀಲ್ದಾರ್ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟ ಪೊಲೀಸ್​ ಕಾನ್ಸ್​ಟೆಬಲ್​

    Bajrang Dal Ban: ಕೆ. ಸುಧಾಕರ್ ನೇತೃತ್ವದಲ್ಲಿ ಬಜರಂಗದಳ, ಹಿಂದೂಪರ ಸಂಘಟನೆಗಳ ಪ್ರತಿಭಟನೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts