ಮಾಜಿ ಪ್ರಧಾನಿ ದೇವೇಗೌಡ, ಇಸ್ರೋ ಸೋಮನಾಥ್​ಗೆ ಗೌರವ ಡಾಕ್ಟರೇಟ್

HDD Somanath
Published on

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿದೆ. ಆಯ್ಕೆ ಸಮಿತಿಯು ಶಿಫಾರಸು ಮಾಡಿದ್ದ ಪಟ್ಟಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ ಎಂದು ಬೆಂಗಳೂರು ವಿವಿ ಮೂಲಗಳು ತಿಳಿಸಿವೆ.

ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಸೆ. 29 ರಂದು ನಡೆಯಬೇಕಿತ್ತು. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಘಟಿಕೋತ್ಸವವನ್ನು ಮುಂದೂಡಲಾಗಿದೆ. ಸದ್ಯದಲ್ಲಿಯೇ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು. ಅದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ಗೌರವ ಡಾಕ್ಟರೇಟ್ ಸೇರಿ ಘಟಿಕೋತ್ಸವಕ್ಕೆ ಸಂಬಂಧಿಸಿದ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಳ್ಳಲಾಗುತ್ತದೆ‌ ಎಂದು ಮೂಲಗಳು ತಿಳಿಸಿವೆ.

ಘಟಿಕೋತ್ಸವ ಸೆ.29ರಂದು ನಡೆಯುವುದಾಗಿದ್ದರೆ, ಬುಧವಾರ ಸುದ್ದಿಗೋಷ್ಠಿ ನಡೆಸಬೇಕಾಗುತ್ತಿತ್ತು. ಕರ್ನಾಟಕ ಬಂದ್ ಇರುವುದರಿಂದ ನಡೆಸಲು ಸಾಧ್ಯವಾಗಿಲ್ಲ ಎಂದು ಬೆಂಗಳೂರು ವಿವಿ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net