More

    ಬೆಂಗಳೂರಿಗೆ ಎನ್ಐಎ ವಿಭಾಗೀಯ ಕಚೇರಿ ಶೀಘ್ರ: ಸುಳಿವು ನೀಡಿದ್ರು ಸಂಸದ ತೇಜಸ್ವಿ ಸೂರ್ಯ

    ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ನ್ಯಾಷನಲ್​ ಇನ್​ವೆಸ್ಟಿಗೇಶನ್ ಏಜೆನ್ಸಿ (ಎನ್​ಐಎ)ಯ ವಿಭಾಗೀಯ ಕಚೇರಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

    ಕಳೆದ ಕೆಲವು ವರ್ಷಗಳಿಂದ ಬೆಂಗಳೂರು ಉಗ್ರ ಚಟುವಟಿಕೆಗಳ ತಾಣವಾಗುತ್ತಿದೆ. ಎನ್​ಐಎ ಇತ್ತೀಚೆಗೆ ನಗರದಲ್ಲಿ ದಾಳಿ ನಡೆಸಿ ಹಲವರನ್ನು ಬಂಧಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಅನೇಕ ಸ್ಲೀಪರ್ ಸೆಲ್​ಗಳನ್ನು ಎನ್​ಐಎ ವಿಫಲಗೊಳಿಸಿದೆ. ಹೀಗಾಗಿ ಎನ್​ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ ಸ್ಥಾಪನೆಯಾಗಬೇಕು ಎಂದು ಗೃಹ ಸಚಿವ ಅಮಿತ್ ಷಾ ಅವರನ್ನು ಆಗ್ರಹಿಸಿದ್ದೆ. ಮನವಿಯನ್ನೂ ಮಾಡಿದ್ದೆ ಎಂದು ತೇಜಸ್ವಿ ಸೂರ್ಯ ಟ್ವೀಟ್​ ಮೂಲಕ ತಿಳಿಸಿದ್ದಾರೆ.

    ಇದನ್ನೂ ಓದಿ: PHOTOS|ಭೀಕರ ರಸ್ತೆ ಅಪಘಾತಕ್ಕೆ ಗರ್ಭಿಣಿ ಸೇರಿ 7 ಜನರ ದಾರುಣ ಸಾವು

    ಮನವಿ ಸ್ವೀಕರಿಸಿರುವ ಗೃಹ ಸಚಿವ ಅಮಿತ್ ಷಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶೀಘ್ರವೇ ಎನ್​ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ ಸ್ಥಾಪನೆ ಆಗಲಿದೆ ಎಂಬ ಭರವಸೆಯನ್ನೂ ಕೊಟ್ಟಿದ್ದಾರೆ. ಅವರಿಗೆ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದು ತೇಜಸ್ವಿ ಟ್ವೀಟ್ ಮಾಡಿದ್ದಾರೆ.

    ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಷರಿಷತ್ ಒಪ್ಪಿಗೆ ಸಿಕ್ಕಿತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts