ನ.25 ಮತ್ತು 26 ರಂದು ನಡೆಯಲಿದೆ ಬಸವನಗುಡಿ ಕಡಲೇಕಾಯಿ ಪರಿಷೆ, ಈ ಬಾರಿಯ ವಿಶೇಷವೇನು? ಇಲ್ಲಿದೆ ನೋಡಿ | Kadalekai Parishe

kadale final
Published on

ಬೆಂಗಳೂರು: ಪ್ರಖ್ಯಾತ ಬಸವನಗುಡಿ ಕಡಲೇಕಾಯಿ ಪರಿಷೆ ನ.25 ಮತ್ತು 26 ರಂದು ನಡೆಯಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಕಡಲೆಕಾಯಿ ಪರಿಷೆಗೆ ವ್ಯಾಪಾರಿಗಳಿಂದ ಸುಂಕ ವಸೂಲಾತಿಗೆ ಬ್ರೇಕ್ ಹಾಕಲು ಇಲಾಖೆ ನಿರ್ಧರಿಸಿದೆ.

ಮುಜರಾಯಿ ಇಲಾಖೆ ಇಂದು ದಿನಾಂಕ ನಿಗದಿ ಮಾಡಿದೆ. ಇಂದು ಅಧಿಕಾರಿಗಳ ಜೊತೆ ಸಭೆ ಮಾಡಿ ಕಡಲೆಕಾಯಿ ಪರಿಷೆ ಸಂಬಂಧ ಸಚಿವ ರಾಮಲಿಂಗಾ ರೆಡ್ಡಿ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದಾರೆ.ಮಲ್ಲೇಶ್ವರಂನ ಶ್ರೀ ಕಾಡು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ, ಕಾಡು ಮಲ್ಲೇಶ್ವರ ಗೆಳೆಯರ ಬಳಗ ಪರಿಷೆಯನ್ನು ಆಯೋಜಿಸಿದೆ. ನವೆಂಬರ್‌ 15 ರಿಂದ 18ರವರೆಗೆ ಕಡಲೆ ಕಾಯಿ ಪರಿಷೆ ನಡೆಯಲಿದೆ.

ಬೆಂಗಳೂರು: ಪ್ರಸಿದ್ದ ಬಸವನಗುಡಿ ಕಡಲೇಕಾಯಿ ಪರಿಷೆ  ನ.25 ಮತ್ತು 26 ರಂದು ನಡೆಯಲಿದೆ.

ಮುಜರಾಯಿ ಇಲಾಖೆ ಇಂದು ದಿನಾಂಕ ನಿಗದಿ ಮಾಡಿದೆ. ಎರಡು ದಿನಗಳ ಕಾಲ ನಡೆಯಲಿರುವ ಕಡಲೆಕಾಯಿ ಪರಿಷೆಗೆ ವ್ಯಾಪಾರಿಗಳಿಂದ ಸುಂಕ ವಸೂಲಾತಿಗೆ ಬ್ರೇಕ್ ಹಾಕಲು ಇಲಾಖೆ ನಿರ್ಧರಿಸಿದೆ. ಇದನ್ನೂ ಓದಿ: ಅಧಿಕಾರಿಗಳು ಜಡ್ಜ್‌ ಆಗಲು ಸಾಧ್ಯವಿಲ್ಲ : ಬುಲ್ಡೋಜರ್‌ ನ್ಯಾಯಕ್ಕೆ ಸುಪ್ರೀಂ ಎಚ್ಚರಿಕೆ

ನ.15 ರಿಂದ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಆರಂಭವಾಗಲಿದ್ದು ಸಂಜೆ 4.30ಕ್ಕೆ ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ಉದ್ಘಾಟಿಸಲಿದ್ದಾರೆ

ಕಡಲೆಕಾಯಿ ಪರಿಷೆ ಹಿನ್ನೆಲೆ

ಕಡಲೆಕಾಯಿ ರೈತರು ತಮ್ಮ ಬೆಳೆಯನ್ನು ಜಾನುವಾರುಗಳಿಂದ ರಕ್ಷಿಸಿಕೊಳ್ಳಲು ಬಸವನನ್ನು ಪೂಜಿಸುತ್ತಾರೆ. ಜಾನುವಾರುಗಳು ಜಮೀನಿಗೆ ಬರುವಂತೆ ಮಾಡುವ ಶಕ್ತಿಗಳನ್ನು ಹತ್ತಿಕ್ಕಲು ರೈತರು ಸಾಂಪ್ರದಾಯಿಕವಾಗಿ ತಮ್ಮ ಮೊದಲ ಬೆಳೆಯನ್ನು ಬಸವ ದೇವರಿಗೆ ಅರ್ಪಿಸುತ್ತಾರೆ. ಇದರಿಂದ ಬೆಳೆ ರಕ್ಷಣೆಯಾಗುತ್ತದೆ ಎಂಬ ನಂಬಿಕೆ ಅವರದ್ದು. ಕಡಲೆ ಪರಿಷೆಯ ಜಾನಪದ ಹಿನ್ನೆಲೆಯಿದು ಎಂದು ಶಿವರಾಂ ವಿವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net