

ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂಭ್ರಮ ಮುಗಿಯುತ್ತಿದ್ದಂತೆ ಇದೀಗ ಬೆಸ್ಕಾಂ ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬೆಸ್ಕಾಂ ತನ್ನ ಗ್ರಾಹಕರಿಗೆ ವಿದ್ಯುಲ್ ಬಿಲ್ ಮೇಲೆ ರಿಯಾಯಿತಿ ನೀಡಲು ನಿರ್ಧರಿಸಿದೆ.
ಗ್ರಾಹಕರು ತಮ್ಮ ವಿದ್ಯುತ್ ಬಿಲ್ನ್ನು ನಿಗದಿತ ದಿನಾಂಕಕ್ಕಿಂತ 10 ದಿನ ಮುಂಚಿತವಾಗಿ ಪಾವತಿಸಿದಲ್ಲಿ ಶೇ. 0.25 ರಷ್ಟು ರಿಯಾಯಿತಿ ಘೋಷಣೆ ಮಾಡಿದೆ. ಅಲ್ಲದೆ ವಿದ್ಯುತ್ ಬಿಲ್ ಮೊತ್ತ 1 ಲಕ್ಷ ರೂ. ಮೀರಿದರೆ ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದೆ. ಮಾಸಿಕ ವಿದ್ಯುತ್ ಬಿಲ್ 1 ಸಾವಿರ ರೂ. ಮೀರಿದ ಮುಂಗಡ ಪಾವತಿಗೂ ಶೇ 0.25 ರಷ್ಟು ರಿಯಾಯಿತಿ ನೀಡಲು ಬೆಸ್ಕಾಂ ನಿರ್ಧರಿಸಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿ ಗ್ರಾಹಕರು ನಿಗದಿತ ಅವಧಿಯೊಳಗೆ ಬಿಲ್ ಪಾವತಿಸದೇ ಇರುವ ಹಿನ್ನೆಲೆಯಲ್ಲಿ ಸಂಸ್ಥೆ ತನ್ನ ಗ್ರಾಹಕರಿಗೆ ಹೊಸ ಕೊಡುಗೆಯನ್ನು ನೀಡಿದೆ. ಈ ಬಗ್ಗೆ ನೂತನ ನಿರ್ಧಾರದ ಬಗ್ಗೆ ಬೆಸ್ಕಾಂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.