More

    ಬೇಸಿಗೆ ಶಿಬಿರಗಳು ಮಕ್ಕಳಿಗೆ ಸಂಜೀವಿನಿ ಇದ್ದಂತೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಅರುಣ್‌ಕುಮಾರ್ ಅಭಿಪ್ರಾಯ

    ಕೆ.ಆರ್.ಪೇಟೆ: ಬೇಸಿಗೆ ಶಿಬಿರಗಳು ಶಾಲಾ ವಿದ್ಯಾರ್ಥಿಗಳ ಪಾಲಿಗೆ ಸಂಜೀವಿನಿ ಇದ್ದಂತೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಅರುಣ್‌ಕುಮಾರ್ ಅಭಿಪ್ರಾಯಪಟ್ಟರು.
    ತಾಲೂಕಿನ ಶೀಳನೆರೆ ಹೋಬಳಿಯ ಚನ್ನಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಪ್ರತಿದಿನ ಶಾಲೆಗಳಲ್ಲಿ ಪಠ್ಯಪುಸ್ತಕದಲ್ಲಿನ ಅಂಶಗಳನ್ನು ಕಲಿಯುವ ಮಕ್ಕಳು, ಬೇಸಿಗೆ ಶಿಬಿರದಲ್ಲಿ ಸ್ಫೋಕನ್ ಇಂಗ್ಲಿಷ್, ಅಗ್ನಿಅನಾಹುತಗಳ ಬಗ್ಗೆ ಮಾಹಿತಿ, ವ್ಯಾಕರಣ, ಕಲೆ, ಸಂಗೀತ ಸೇರಿದಂತೆ ವಿವಿಧ ಬಗೆಯ ಮನರಂಜನಾ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿನ ವಿವಿಧ ಪ್ರತಿಭೆಗಳನ್ನು ಗುರುತಿಸಲಾಗುತ್ತದೆ. ಆದ್ದರಿಂದ ಮಕ್ಕಳು ಕಡ್ಡಾಯವಾಗಿ ಶಿಬಿರದಲ್ಲಿ ಪಾಲ್ಗೊಂಡು ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಬೇಕು. ಆ ಮೂಲಕ ಸರ್ಕಾರಿ ಶಾಲೆಗಳು ಸಹ ಖಾಸಗಿ ಶಾಲೆಗಳಿಗೆ ಕಮ್ಮಿ ಇಲ್ಲ ಎಂಬ ಸಂದೇಶ ನೀಡಬೇಕು ಎಂದರು.
    ಪಾಲಕರು ಹಾಗೂ ಸಮುದಾಯ ಒಟ್ಟಿಗೆ ಕೈಜೋಡಿಸಿದಾಗ ಮಾತ್ರ ಸರ್ಕಾರಿ ಶಾಲೆಗಳು ಬಲವರ್ಧನೆಗೊಳ್ಳುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸುತ್ತಿರುವುದು ಸಂತಸದ ವಿಷಯ. ಇಲ್ಲಿನ ಮಕ್ಕಳಿಗೆ ನವೋದಯ ಪರೀಕ್ಷೆ ಎದುರಿಸಲು ಪೂರ್ವ ತರಬೇತಿಯನ್ನೂ ಸಹ ನೀಡಲಾಗುತ್ತದೆ ಎಂದರು.
    ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್, ಮುಖ್ಯಶಿಕ್ಷಕ ಮರುವನಹಳ್ಳಿ ಬಸವರಾಜು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷೆ ಶ್ರುತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಮಂಜುಳಾ, ಶಿಕ್ಷಕ ಮಂಜು, ಅಂಗನವಾಡಿ ಶಿಕ್ಷಕಿ ಬಿ.ಬಿ.ಪ್ರಮೀಳಾ, ಎಸ್‌ಡಿಎಂಸಿ ಸದಸ್ಯೆ ಮಮತಾ, ಜವರೇಗೌಡ, ಮಂಜೇಗೌಡ ಸೇರಿದಂತೆ ಶಾಲಾ ಮಕ್ಕಳು, ಪಾಲಕರು. ಗ್ರಾಮಸ್ಥರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts