

ಬೆಳ್ವೆ: ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂವು 2024-25 ನೇ ಸಾಲಿನಲ್ಲಿ ಸಲ್ಲಿಸಿದ ಉತ್ತಮ ಸೇವೆ ಹಾಗೂ ಸರ್ವಾಂಗೀಣ ಅಭಿವೃದ್ಧಿ ಗುರುತಿಸಿ ಅವಿಭಜಿತ ದಕ್ಷಿಣಕನ್ನಡ ಜಿಲ್ಲಾಮಟ್ಟದಲ್ಲಿ ಅತ್ಯತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂ ಪ್ರಶಸ್ತಿಯನ್ನು ಪಡೆದಿದೆ.
ಮಂಗಳೂರಿನಲ್ಲಿ ನಡೆದ ಜಿಲ್ಲಾ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರಕುವಾರ್ ಅವರು ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೀರ್ತಿಕುವಾರ್ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ವಾಡಿ ಸನ್ಮಾನಿಸಿದರು. ಉಪಾಧ್ಯಕ್ಷ ಬಿ.ಹರೀಶ್ ಕಿಣಿ ಬೆಳ್ವೆ, ನಿರ್ದೇಶಕ ಕೃಷ್ಣ ನಾಯ್ಕ, ಸದಸ್ಯ ಅಚ್ಚುತ ಶೆಟ್ಟಿ ಉಪಸ್ಥಿತರಿದ್ದರು.