ಕಾರ್ಕಳ: ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿಗೆ ಉಪನ್ಯಾಸಕ ಕೊಡಿಬೆಟ್ಟು ಗಣೇಶ್ ಪ್ರಸಾದ್ ಭಾಜನರಾಗಿದ್ದಾರೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ಗಣೇಶ್ ಪ್ರಸಾದ್ ಅವರಿಗೆ ನೀಡಲಾಗಿದೆ ಎಂದರು. ಗಣೇಶ್‌ಪ್ರಸಾದ್ ಕೊಡಿಬೆಟ್ಟು ದಿ.ದೇವದಾಸ್ ನಾಯಕ್ ಹಾಗೂ ಡಿ.ಶಾಂತ ನಾಯಕ್ ಇವರ ಪುತ್ರ. ಪ್ರಸ್ತುತ ಉಡುಪಿಯ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಸ್ಥೆಯ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಸಹಿತ ಹಲವರು ಅಭಿನಂದಿಸಿದ್ದಾರೆ.