More

    ಶಾಸಕ ಯಶ್​ಪಾಲ್​ಗೆ ‘ಬೆಸ್ಟ್​ ಯಂಗ್​ ಲೀಡರ್​’ ಪ್ರಶಸ್ತಿ

    ಸಹಕಾರಿ ಕ್ಷೇತ್ರದ ವಿಶಿಷ್ಟ ಸಾಧನೆಗಾಗಿ ಪುರಸ್ಕಾರ | ಮುಂಬಯಿಯಲ್ಲಿ ಪ್ರದಾನ

    ವಿಜಯವಾಣಿ ಸುದ್ದಿಜಾಲ ಉಡುಪಿ
    ಸಹಕಾರ ಕ್ಷೇತ್ರದ ವಿಶಿಷ್ಟ ಸಾಧನೆ ಪರಿಗಣಿಸಿ ನೀಡುವ ರಾಷ್ಟ್ರ ಮಟ್ಟದ ಪ್ರತಿಷ್ಠಿತ ಭಾರತ್​ ರತ್ನ ಸಹಕಾರಿತ ಸನ್ಮಾನ್​-2024ರ ‘ಬೆಸ್ಟ್​ ಯಂಗ್​ ಲೀಡರ್​’ ಪ್ರಶಸ್ತಿಗೆ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಭಾಜನರಾಗಿದ್ದಾರೆ.

    ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್​ ಮಹಾಮಂಡಳ ಮುಂಬಯಿಯಲ್ಲಿ ಬುಧವಾರ ಆಯೋಜಿಸಿದ್ದ ಭಾರತ್​ ಕೋ-ಆಪರೇಟಿವ್​ ಬ್ಯಾಂಕಿಂಗ್​ ಸಮ್ಮಿಟ್​-2024ರ ಸಮಾರಂಭದಲ್ಲಿ ಶಾಸಕ ಯಶ್​ಪಾಲ್​ ಸುವರ್ಣ ಪ್ರಶಸ್ತಿ ಸ್ವೀಕರಿಸಿದರು.

    ಕೇಂದ್ರ ಸರ್ಕಾರದ ಮಾಹಿತಿ ಹಾಗೂ ಸಂವಹನ ಇಲಾಖೆಯ ಜಂಟಿ ಕಾರ್ಯದರ್ಶಿ ಸುಮ್ನೇಶ್​ ಜೋಷಿ ಅವರು ಯಶ್​ಪಾಲ್​ ಸುವರ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

    ಯಶಸ್ವಿ ಅಧ್ಯಕ್ಷತೆ

    ಕರಾವಳಿ ಕರ್ನಾಟಕದ ಪ್ರತಿಷ್ಠಿತ ಪಟ್ಟಣ ಸಹಕಾರಿ ಬ್ಯಾಂಕ್​ ಎಂಬ ಹೆಗ್ಗಳಿಕೆಗೆ ಪಾತ್ರವಾದ ಮಹಾಲಕ್ಷ್ಮೀ ಕೋ-ಆಪರೇಟಿವ್​ ಬ್ಯಾಂಕ್​ ಲಿ. ಉಡುಪಿ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್​ ನಿ. ಮಂಗಳೂರು ಇದರ ಅಧ್ಯಕ್ಷರಾದ ಯಶ್​ಪಾಲ್​, ಎರಡೂ ಸಂಸ್ಥೆಗಳನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿದ್ದಾರೆ. ಅಲ್ಲದೆ, ನಿರಂತರ ಲಾಭದಾಯಕ ಸಂಸ್ಥೆಯನ್ನಾಗಿಸಿದ ಹಿರಿಮೆಗೂ ಅವರು ಪಾತ್ರರಾಗಿದ್ದಾರೆ.

    ಹಲವಾರು ಪ್ರಶಸ್ತಿ, ಪುರಸ್ಕಾರ

    ಈಗಾಗಲೇ ಸಹಕಾರ ಕ್ಷೇತ್ರದ ಸರ್ವಾಂಗೀಣ ಸಾಧನೆ ಗುರುತಿಸಿ ರಾಜ್ಯ ಸರ್ಕಾರದ ಸಹಕಾರ ಇಲಾಖೆಯ 2022ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಯಶ್​ಪಾಲ್​ ಸುವರ್ಣ ಭಾಜನರಾಗಿದ್ದಾರೆ. ಅಲ್ಲದೆ, ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್​ ಹಾಗೂ ಮಹಾಲಕ್ಷ್ಮೀ ಬ್ಯಾಂಕ್​ಗೆ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಹಲವಾರು ಪ್ರಶಸ್ತಿ, ಪುರಸ್ಕಾರ ಲಭಿಸಿರುವುದೂ ವಿಶೇಷತೆಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts