More

    ಅಮೃತ -ಸುವರ್ಣ ಮಹೋತ್ಸವ

    ಬಾಗಲಕೋಟೆ: ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯ, ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯಕ್ಕೆ ೭೫ ವರ್ಷ ಹಾಗೂ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯಕ್ಕೆ ೫೦ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ನ.೨೫ ಹಾಗೂ ೨೬ ರಂದು ಬಿವಿವಿ ಸಂಘದ ಹಳೇ ಮೈದಾನದಲ್ಲಿ ಅಮೃತ-ಸುವರ್ಣ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಹೇಳಿದರು.
    ಹಳೇ ಮೈದಾನದ ಬೃಹತ್ ವೇದಿಕೆಯಲ್ಲಿ ನ.೨೫ ರಂದು ಬೆಳಗ್ಗೆ ೧೦ ಗಂಟೆಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಚೇರಮನ್, ಪದ್ಮವಿಭೂಷಣ್ ಡಾ.ಕೆ.ಕಸ್ತೂರಿರಂಗನ್ ಉದ್ಘಾಟಿಸಲಿದ್ದಾರೆ. ಬಿವಿವಿ ಸಂಘದ ಅಧ್ಯಕ್ಷ ಚರಂತಿಮಠ ಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಂಸದ ಪಿ.ಸಿ.ಗದ್ದಿಗೌಡರ, ಬೆಳಗಾವಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಆಂಧ್ರಪ್ರದೇಶದ ಕೇಂದ್ರೀಯ ವಿವಿಯ ಕುಲಪತಿ ಪ್ರೊ.ತೇಜಸ್ವಿ ಕಟ್ಟಿಮನಿ ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ. ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ ಉಪಸ್ಥಿತರಿರುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ..
    ನ.೨೫ ಹಾಗೂ ೨೬ ರಂದು ಸಂಜೆ ಸಾಂಸ್ಕೃತಿ ಕಾರ್ಯಕ್ರಮಗಳು ಜರುಗಲಿವೆ. ನ.೨೫ ರಂದು ಸಂಜೆ ಡಾ.ಸಿದ್ದರಾಮಯ್ಯ ಮಠಪತಿ ಅವರಿಂದ ಹಿಂದುಸ್ತಾನಿ ಸಂಗೀತ, ಕೊಲ್ಲಾಪುರದ ಜಾಗೋ ಹಿಂದುಸ್ತಾನಿ ತಂಡದಿಂದ ದೇಶಭಕ್ತಿ ಗೀತೆಗಳ ಕಾರ್ಯಕ್ರಮ ಜರುಗಲಿದೆ.ನ.೨೬ ರಂದು ಸಂಜೆ ೫.೩೦ ಗಂಟೆಯಿಂದ ೯.೩೦ ಗಂಟೆ ವರೆಗೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನಂತ ಕುಲಕರ್ಣಿ ಸುಗಮ ಸಂಗೀತ, ಬಿವಿವಿ ಸಂಘದ ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಮನರಂಜಾನ ಕಾರ್ಯಕ್ರಮ, ಖ್ಯಾತ ಗಾಯಕಿ ಸಂಗೀತ ಕಟ್ಟಿ ಅವರ ಸಂಗೀತ ಸುಧೆ ನಡೆಯಲಿದೆ.
    ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರ)ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ, ಪ್ರಾಚಾರ್ಯ ವಿಜಯಕುಮಾರ ಕಟಗಿಹಳ್ಳಿಮಠ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts