More

    ಪ್ರಜಾಧ್ವನಿ ಯಾತ್ರೆಗೆ ಕೋಟೆನಗರಿ ಸಜ್ಜು..!!

    ಬಾಗಲಕೋಟೆ: ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಮತದಾರರ ಮನವೊಲಿಕೆ ನಾನಾ ಕಸರತ್ತು ಆರಂಭಿಸಿವೆ. ವಿರೋಧ ಪಕ್ಷ ಕಾಂಗ್ರೆಸ್ ಮುಂಬರುವ ಚುನಾವಣೆಗೆ ಶತಗತಾಯ ಅಽಕಾರದ ಚುಕ್ಕಾಣೆ ನಡೆಯಲು ಭರ್ಜರಿ ತಯಾರಿಸಿ ನಡೆಸಿದೆ. ಇದರ ಅಂಗವಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರಜಾಧ್ವನಿಯಾತ್ರೆಗೆ ಬುಧವಾರ ಕೋಟೆನಗರಿಗೆ ಆಗಮಿಸಲಿದೆ.
    ಇಲ್ಲಿನ ನವನಗರದ ಕಾಳಿದಾಸ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಯಾತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಏಳು ಮತಕ್ಷೇತ್ರಗಳ ಕಾರ್ಯಕರ್ತರು, ಪಕ್ಷದ ಪದಾಧಿಕಾರಿಗಳು, ಅಭಿಮಾನಿಗಳು ಯಾತ್ರೆ ಯಶಸ್ವಿಗೆ ಪಣತೊಟ್ಟು ಶ್ರಮ ವಹಿಸಿದ್ದಾರೆ. ಅಂದಾಜು ೨೫ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ವೇದಿಕೆ, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಿದೆ.

    ವೇದಿಕೆ ಸಿದ್ಧತೆ ಅಂತಿಮ.. ಕಾರ್ಯಕ್ರಮದ ಮುಖ್ಯವೇದಿಕೆ ೪೦*೨೦ ಅಳತೆ, ೨೦ ಸಾವಿರ ಜನರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ಮಧ್ಯಾಹ್ನ ಊಟಕ್ಕೆ ಫಲಾವು ಸಿದ್ಧಪಡಿಸಲಾಗಿದೆ. ಕಾಳಿದಾಸ ಕಾಲೇಜು ಮೈದಾನ, ಅಂಜುಮನ್ ಕಾಲೇಜು ಮೈದಾನದಲ್ಲಿ ಬೈಕ್, ಕಾರು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗ್ಗೆ ೧೧ ಗಂಟೆಗೆ ಕಾರ್ಯಕ್ರಮ ಆರಂಭಗೊಂಡು ಮಧ್ಯಾಹ್ನ ೨ ಗಂಟೆಗೆ ಮುಕ್ತಾಯಗೊಳ್ಳಲಿದೆ. ನಂತರ ಯಾತ್ರೆಯೂ ಬಾದಾಮಿ ತಲುಪಿ ಮರುದಿನ ಗದಗ ಕಡೆ ಪ್ರಯಾಣ ಬೆಳೆಸಲಿದೆ.


    ಯಾವ ನಾಯಕರು ಭಾಗಿ: ರಾಜ್ಯ ಉಸ್ತುವಾರಿ ಸುರ್ಜೆವಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿ.ಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ, ಮುಖಂಡರಾದ ಬಸವರಾಜ ರಾಯರೆಡ್ಡಿ, ಸತೀಶ ಜಾರಕಿಹೊಳಿ, ಯು.ಟಿ.ಖಾದರ, ಎಂ.ಬಿ.ಪಾಟೀಲ, ಎಸ್.ಆರ್.ಪಾಟೀಲ ಸೇರಿದಂತೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಮಾಜಿ, ಹಾಲಿ ಸದಸ್ಯರು ಭಾಗವಹಿಸಲಿದ್ದಾರೆ.

    ಹೊಸ ಘೋಷಣೆ.. ಬಿಜೆಪಿ ಟಕ್ಕರ್..!

    ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸುವ ಸಾಧ್ಯತೆ ದಟ್ಟವಾಗಿದೆ. ಪ್ರಮುಖವಾಗಿ ಕೃಷ್ಣಾ ಮೇಲ್ದಂಡೆ ಯೋಜನೆ, ಪ್ರವಾಸೋದ್ಯಮ, ಸಂತ್ರಸ್ತರ ಸಮಸ್ಯೆಗಳು ಪ್ರಸ್ತಾಪ ಮಾಡಲಿದ್ದಾರೆ. ಪ್ರಮುಖವಾಗಿ ಜಿಲ್ಲೆಯ ನಮ್ಮ ಸರ್ಕಾರ ಅಧಿಕಾರ ಬಂದಲ್ಲಿ ಮಾಡುವ ನೀಡುವ ಯೋಜನೆ, ಅನುದಾನ ಬಗ್ಗೆ ಭರವಸೆ ನೀಡಲಿದ್ದಾರೆ. ಜೊತೆಗೆ ಬಿಜೆಪಿ ಸರ್ಕಾರ ಅವಧಿಯಲ್ಲಿ ನಡಿದಿದೆ ಎನ್ನಲಾದ ಹಗರಣ, ಭ್ರಷ್ಟಾಚಾರ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಡುವ ಪ್ರಯತ್ನ ಮಾಡುವ ಮೂಲಕ ಬಿಜೆಪಿಗೆ ಟಕ್ಕರ್ ಕೊಡುವ ಸಾಧ್ಯತೆಗಳಿವೆ.

    ಪ್ರಜಾಧ್ವನಿ ಯಾತ್ರೆ ಅನೇಕ ರೀತಿಯಲ್ಲಿ ಮಹತ್ವ ಪಡೆದುಕೊಂಡಿದೆ. ಚುನಾವಣೆಗೆ ಕಾರ್ಯಕರ್ತರು, ಪದಾಧಿಕಾರಿಗಳ ಉತ್ಸಾಹ ಇಮ್ಮಡಿಗೊಳಿಸುವುದ ಜೊತೆಗೆ ಬಿಜೆಪಿ ಜನ ವಿರೋಽ ನೀತಿ ಮನವರಿಕೆ ಮಾಡಿಕೊಡಲಾಗುತ್ತದೆ. ರಾಜ್ಯಮಟ್ಟದ ನಾಯಕರು ಜಿಲ್ಲೆಗೆ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಏನು ಮಾಡುತ್ತೇವೆ ಅಂತ ಘೋಷಣೆ ಮಾಡಲಿದ್ದಾರೆ. ೨೫ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ. ಸಕಲ ಸಿದ್ಧತೆ ಪೂರ್ಣಗೊಂಡಿದೆ.

    *ಎಸ್.ಜಿ.ನಂಜಯ್ಯನಮಠ ಕಾಂಗ್ರೆಸ್ ಜಿಲ್ಲಾಧ್ಯಕ್ಷ

    ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆದಿದೆ. ಬಡವರು, ಹಿಂದುಳಿದವರು, ದಲಿತರು, ಮಹಿಳೆಯರು ಸೇರಿದಂತೆ ಎಲ್ಲ ವರ್ಗದ ಜನರ ಏಳಿಗೆಗಾಗಿ ಶ್ರಮಿಸಿದೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಬಾಗಲಕೋಟೆ ಯಾತ್ರೆ ಜಿಲ್ಲೆಯಲ್ಲಿ ಕಾಂಗ್ರೆಸ್‌ನಲ್ಲಿ ಉತ್ಸಾಹ ಮೂಡಿಸಲಿದೆ.

    * ಎಚ್.ಬಿ.ಗೊರವರ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಕಾರ್ಯದರ್ಶಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts