21 C
Bengaluru
Thursday, January 23, 2020

ಸದ್ಯವೇ ಬಿಜಿಎಸ್ ಮೇಲುರಸ್ತೆ ಬಂದ್ : ದುರಸ್ತಿ ಕಾಮಗಾರಿ ಹಿನ್ನೆಲೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಬೆಂಗಳೂರು: ನಗರದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ (ಬಿಜಿಎಸ್) ಮೇಲ್ಸೇತುವೆಯ 2ನೇ ಬದಿಯ ದುರಸ್ತಿ ಕಾಮಗಾರಿಯನ್ನು ಬಿಬಿಎಂಪಿ ಮುಂದಿನ ವಾರ ಆರಂಭಿಸಲಿದೆ.

ಒಟ್ಟು 2 ಹಂತಗಳಲ್ಲಿ ಒಂದು ತಿಂಗಳು ಕಾಮಗಾರಿ ನಡೆಯಲಿದೆ. ಸಿರ್ಸಿ ರಸ್ತೆಯಿಂದ ಪುರಭವನದ ಕಡೆಗೆ ಸಾಗುವ ಪಥದಲ್ಲಿ ವಾಹನ ಸಂಚಾರ ಬಂದ್ ಮಾಡಲಾಗುತ್ತದೆ. ಇದರಿಂದಾಗಿ ಮೈಸೂರು ರಸ್ತೆ ಬಳಸುವ ವಾಹನ ಸವಾರರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು ಉತ್ತಮ.

ಕಳೆದ ಮಾರ್ಚ್ ವೇಳೆಗೆ ಪುರಭವನದಿಂದ ಸಿರ್ಸಿ ವೃತ್ತಕ್ಕೆ ಸಾಗುವ ಪಥವನ್ನು ದುರಸ್ತಿ ಮಾಡಲಾಗಿತ್ತು. ನವೆಂಬರ್​ನಲ್ಲೇ ಇನ್ನೊಂದು ಪಥದ ಕಾಮಗಾರಿ ಆರಂಭವಾಗಬೇಕಿತ್ತು. ಆದರೆ, ಪೊಲೀಸರು ಅದಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರಂಭಗೊಂಡಿರಲಿಲ್ಲ. ಇದೀಗ ಪೊಲೀಸರು ಸಂಚಾರ ಮಾರ್ಗ ಬದಲಿಸಿದ್ದು, ದುರಸ್ತಿಗೆ ಅನುಮತಿ ನೀಡಲು ಒಪ್ಪಿದ್ದಾರೆ.

ದುರಸ್ತಿ ವೆಚ್ಚ 4.3 ಕೋಟಿ ರೂ.: ಒಟ್ಟು 2.65 ಕಿ.ಮೀ. ಉದ್ದದ ಮೇಲುರಸ್ತೆಯ ಎರಡೂ ಪಥಗಳ ಮರುಡಾಂಬರೀಕರಣಕ್ಕೆ 4.02 ಕೋಟಿ ರೂ. ವೆಚ್ಚ ನಿಗದಿಯಾಗಿದೆ. ಲೋಕಸಭೆ ಚುನಾವಣೆಗೂ ಮುನ್ನ ಒಂದು ಪಥದ ಕಾಮಗಾರಿ ಮುಗಿದಿತ್ತು. ಕಳೆದ ತಿಂಗಳು ದಿಢೀರನೆ ಮತ್ತೊಂದು ಪಥದ ಕಾಮಗಾರಿ ಆರಂಭಿಸಲು ಬಿಬಿಎಂಪಿ ಮುಂದಾಗಿತ್ತು. ಆದರೆ, ಮೈಸೂರು ರಸ್ತೆಯಲ್ಲಿ ವೈಟ್​ಟಾಪಿಂಗ್ ಕಾಮಗಾರಿ ಮುಂದುವರಿದಿದ್ದರಿಂದ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧಕ್ಕೆ ಪೊಲೀಸರು ನಿರಾಕರಿಸಿದ್ದರು. ಹಾಗಾಗಿ ಕಾಮಗಾರಿ ಮುಂದೂಡಲಾಗಿತ್ತು.

ಇದೀಗ ಪೊಲೀಸರು 3-4 ದಿನದಲ್ಲಿ ಸಂಚಾರ ಬಂದ್ ಮಾಡುವುದಾಗಿ ತಿಳಿಸಿದ್ದಾರೆ. ಅವರ ಒಪ್ಪಿಗೆ ಸಿಗುತ್ತಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಬಿಬಿಎಂಪಿ ಇಂಜಿನಿಯರ್ ಲೋಕೇಶ್ ತಿಳಿಸಿದ್ದಾರೆ.

ಬದಲಿ ಮಾರ್ಗ: ಮೈಸೂರು ರಸ್ತೆಯಿಂದ ಗೂಡ್ಸ್ ಶೆಡ್ ರಸ್ತೆಯವರೆಗೆ ಮೊದಲು ರಸ್ತೆ ಬಂದ್ ಮಾಡಲಾಗುತ್ತದೆ. ಮೈಸೂರು ರಸ್ತೆ ಕಡೆಯಿಂದ ಬರುವ ವಾಹನಗಳನ್ನು ಈಗಿನ ಸಂಚಾರಕ್ಕೆ ವಿರುದ್ಧ ಮಾರ್ಗದಲ್ಲಿ ಪುರಭವನದವರೆಗೆ ಅವಕಾಶ ನೀಡಲಾಗುತ್ತದೆ. ಪುರಭವನದ ಕಡೆಯಿಂದ ಸಿರ್ಸಿ ವೃತ್ತದ ಕಡೆ ಚಲಿಸುವ ವಾಹನಗಳಿಗೆ ಬೆಳಗ್ಗೆ ವೇಳೆ ಮೇಲುರಸ್ತೆಯ ಕೆಳ ಮಾರ್ಗದಲ್ಲಿ, ಸಂಜೆ ವೇಳೆ ಮೇಲುರಸ್ತೆಯಲ್ಲಿ ರಾಯನ್ ವೃತ್ತದವರೆಗೆ ಸಂಚರಿಸಲು ಅವಕಾಶ ನೀಡಲಾಗುವುದು. ಸಿರ್ಸಿ ವೃತ್ತ ಕಡೆಯಿಂದ ಪುರಭವನದವರೆಗೆ ಸಂಚರಿಸುವ ವಾಹನಗಳಿಗೆ ಸಂಜೆ ಬ್ರಿಯಾಂಡ್ ವೃತ್ತ ಬಳಿ ಮತ್ತೊಂದು ಪಥಕ್ಕೆ ಹೊರಳಿಸಿ ಪುರಭವನಕ್ಕೆ ಸಂಪರ್ಕ ಕಲ್ಪಿಸಲಾಗುತ್ತದೆ.

ಸಿರ್ಸಿ ವೃತ್ತ ಮೇಲುರಸ್ತೆಯ ಸಂಚಾರ ಬದಲಾವಣೆಗೆ ಸಂಚಾರ ಪೊಲೀಸರು ಅವಕಾಶ ಮಾಡಿಕೊಟ್ಟ ಬಳಿಕ ಕಾಮಗಾರಿ ಗಳನ್ನು ಆರಂಭಿಸಿ, ನಿಗದಿತ ಸಮಯದಲ್ಲಿ ಅದನ್ನು ಗುಣಮುಟ್ಟ ದೊಂದಿಗೆ ಮುಕ್ತಾಯ ಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ.

| ಗೌತಮ್ ಕುಮಾರ್, ಬಿಬಿಎಂಪಿ ಮೇಯರ್

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...