More

    ರಾಷ್ಟ್ರೀಯ ಮನ್ನಣೆ ಹೊಸ್ತಿಲಲ್ಲಿ ಭದ್ರಾ ಮೇಲ್ದಂಡೆ; ಅಧಿಕೃತ ಘೋಷಣೆಯೊಂದೇ ಬಾಕಿ, ಕೇಂದ್ರ ಭರಿಸಲಿದೆ 16,125 ಕೋಟಿ ರೂ.

    ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಬೇಕೆಂಬ ರಾಜ್ಯದ ಬಹುಕಾಲದ ಬೇಡಿಕೆಗೆ ಕೇಂದ್ರ ಮನ್ನಣೆ ನೀಡಿದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಘೋಷಿಸಬೇಕು ಎಂಬ ಬೇಡಿಕೆಗೆ ಅಂತಿಮ ಒಪ್ಪಿಗೆ ನೀಡುವ ಮೊದಲು, ಗುರುವಾರ ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್‌ಮೆಂಟ್‌ ಸಮಿತಿ ಸಭೆಯಲ್ಲಿ ಅನುಮೋದನೆ ದೊರೆತಿದೆ. ಮುಂದೆ ಪ್ರಧಾನಿ ನೇತೃತ್ವದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ.

    ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಭದ್ರಾ ಮೇಲ್ದಂಡೆ ಯೋಜನೆಯ 16,125 ಕೋಟಿ ರೂ. ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್‌ಮೆಂಟ್ ಸಮಿತಿ ಸಭೆಯಲ್ಲಿ ಅನುಮೋದನೆ ದೊರೆತಿರುವುದು ಸಂತಸ ತಂದಿದೆ. ಈ ಯೋಜನೆಯಿಂದ ನಾಲ್ಕು ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಮನವಿಗೆ ಸ್ಪಂದಿಸಿ ಯೋಜನೆಗೆ ಅನುಮೋದನೆ ದೊರಕಿಸಿ ಕೊಟ್ಟ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಇದೇ ವೇಳೆ ರಾಜ್ಯದ ಜನರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

    ವಿಶೇಷವೆಂದರೆ ಸಿಡಿ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನ ತ್ಯಾಗ ಮಾಡಿದ ರಮೇಶ್ ಜಾರಕಿಹೊಳಿ ಅವರು ಜಲಸಂಪನ್ಮೂಲ ಖಾತೆ ವಹಿಸಿಕೊಂಡ ಮೇಲೆ ಈ ಯೋಜನೆ ವಿಚಾರದಲ್ಲಿ ಹಲವು ಬಾರಿ ದೆಹಲಿಗೆ ತೆರಳಿ ಸಚಿವರನ್ನು ಭೇಟಿ ಮಾಡಿ ಒತ್ತಡ ತಂದಿದ್ದರು.

    ಪೊಲೀಸ್‌ ಆಗಬೇಕಿದ್ದ ಇಬ್ಬರು ಜೈಲು ಸೇರಿದರು; ಅಂದು ಫಿಟ್‌ ಅನಿಸಿಕೊಂಡಿದ್ದವರು ಇಂದು ಅನ್‌ಫಿಟ್‌; ಅವರು ಮಾಡಿದ್ದಾದರೂ ಏನು?

    ಚಿನ್ನದ ಹುಡುಕಾಟದಲ್ಲಿ ವಜ್ರ ಕಳೆದುಕೊಂಡವರೆಷ್ಟೋ?; ಇಲ್ಲಿವೆ ಆ ಚಿನ್ನ-ವಜ್ರಗಳು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts