More

    ಕಡೂರು ಕ್ಷೇತ್ರದ ಪ್ರತಿ ಗ್ರಾಮಕ್ಕೂ ಭದ್ರಾ ನೀರು

    ಕಡೂರು: ಮುಂದಿನ ಎರಡು ವರ್ಷದಲ್ಲಿ ತಾಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಭದ್ರಾ ನೀರು ಒದಗಿಸಿಕೊಡಬೇಕೆಂಬ ಆಶಯ ಹೊಂದಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

    ತಾಲೂಕಿನ ಪಿ.ಕೋಡಿಹಳ್ಳಿಯಲ್ಲಿ ಭಾನುವಾರ ಸಾರ್ವಜನಿಕ ಸಮುದಾಯ ಭವನ ಮತ್ತು ಜಲಜೀವನ್ ಮಿಷನ್ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದರು.
    ಹಿಂದುಳಿದ ಗ್ರಾಮಗಳಲ್ಲಿ ಮೂಲ ಸೌಕರ್ಯ ಒದಗಿಸುವುದು ಮೊದಲ ಅದ್ಯತೆ. ಪಿ.ಕೋಡಿಹಳ್ಳಿ ಗ್ರಾಮದಲ್ಲಿ ಬಹುದಿನಗಳ ಬೇಡಿಕೆಯಾದ ಸಮುದಾಯ ಭವನ ಕಾಮಗಾರಿಗೆ ಮೊದಲ ಹಂತದಲ್ಲಿ 30 ಲಕ್ಷ ರೂ. ಅನುದಾನ ಒದಗಿಸಲಾಗಿದೆ ಎಂದರು.
    ರಸ್ತೆ ಅಭಿವೃದ್ಧಿಗಾಗಿ 65 ಲಕ್ಷ ರೂ.ಗೂ ಹೆಚ್ಚು ಅನುದಾನವನ್ನು ಈ ಗ್ರಾಮ ವ್ಯಾಪ್ತಿಯಲ್ಲೇ ಒದಗಿಸಲಾಗಿದೆ. ತಾಲ್ಲೂಕಿನ ಎಲ್ಲ ಗ್ರಾಮದ ಪ್ರತಿ ಮನೆಗೂ ಕುಡಿಯುವ ನೀರೊದಗಿಸುವ 90 ಕೋಟಿ ರೂ. ವೆಚ್ಚದ ಜಲಜೀವನ್ ಮಿಷನ್ ಕಾಮಗಾರಿ ಪ್ರಗತಿಯಲ್ಲಿದೆ. ಹಳೆಯ ಪೈಪ್‌ಲೈನ್ ಬದಲಾಯಿಸಿ ಭದ್ರಾ ನದಿಯಿಂದ ಶುದ್ಧ ಕುಡಿಯುವ ನೀರು ದೊರೆಯುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಗ್ರಾಮದ ಬೇಡಿಕೆಗಳನ್ನು ಹಂತ ಹಂತವಾಗಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.
    ಜಿಪಂ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ ಮಾತನಾಡಿ, ಗ್ರಾಮಕ್ಕೆ ಪಶು ಆಸ್ಪತ್ರೆ ಮಂಜೂರಾತಿ ಮಾಡಿಸಬೇಕು. ಜತೆಗೆ ಸಾರಿಗೆ ಸಂಪರ್ಕ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಶಾಸಕರು ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದರು.
    ತಾಪಂ ಮಾಜಿ ಅಧ್ಯಕ್ಷ ಕೋಡಿಹಳ್ಳಿ ಮಹೇಶ್ವರಪ್ಪ ಮಾತನಾಡಿ, ಎಲ್ಲ ಕಾಲಘಟ್ಟದ ಜನಪ್ರತಿನಿಗಳಿಂದ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ಮಾಡಿಸಿಕೊಳ್ಳುವಲ್ಲಿ ಗ್ರಾಮ ಹಿಂದೆ ಬಿದ್ದಿಲ್ಲ. ಗ್ರಾಮದಲ್ಲಿ ಅಗತ್ಯ ಪಶು ಆಸ್ಪತ್ರೆ ಮಂಜೂರಾತಿ ಅವಶ್ಯವಿದೆ ಎಂದರು.
    ಪುರ ಗ್ರಾಪಂ ಅಧ್ಯಕ್ಷೆ ಸುಮಾ ಮಹೇಶ್, ಉಪಾಧ್ಯಕ್ಷ ಈಶ್ವರಪ್ಪ, ಕೆ.ಆರ್.ಅಶೋಕ್, ಪುಷ್ಪಲತಾ, ಮಂಜಪ್ಪ, ನಾಗಮ್ಮ, ಮನು, ಮುಖಂಡರಾದ ಉಮೇಶ್, ರವಿ, ಸಿದ್ದಪ್ಪ, ಕೆ.ಎ.ಶಾಂತಪ್ಪ, ಜಯಣ್ಣ, ಗೋವಿಂದಪ್ಪ, ಅಬಿದ್ ಪಾಷಾ, ಅಶೋಕ್, ಪಿಎಸ್‌ಐ ರಂಗನಾಥ್, ಪಿಡಿಒ ಶುಭಲಕ್ಷ್ಮೀ, ಎಇಇ ಅಶ್ವಿನಿ, ಗಿರೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts