ಶಿವಮೊಗ್ಗ: ಭದ್ರಾವತಿ ಹಳೇನಗರ ಠಾಣಾ ವ್ಯಾಪ್ತಿಯ ಎಪಿಎಂಸಿ ಆವರಣದ ಖಾಲಿ ಜಾಗದಲ್ಲಿ ಆಟೋ ಚಾಲಕನ ಹತ್ಯೆ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿಯ ಕುಶಾಲ್‌ಕುಮಾರ್ (35) ಮತ್ತು ನ್ಯೂಟೌನ್ ಹುತ್ತಾ ಕಾಲನಿಯ ಸೋಮಶೇಖರ್ ಅಲಿಯಾಸ್ ಪುಟ್ಟ (33) ಬಂಧಿತರು. ಹೊಳೆಹೊನ್ನೂರು ಮೂಲದ ಶಿವಮೊಗ್ಗದ ನಿವಾಸಿ ರೂಪೇಶ್‌ಕುಮಾರ್‌ನನ್ನು ಹಳೇ ವೈಷ್ಯಮಕ್ಕೆ ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ.
ಸೋಮವಾರ ರಾತ್ರಿ ಮೂವರು ಒಟ್ಟಿಗೆ ಮದ್ಯ ಸೇವಿಸಿದ್ದು ಬಳಿಕ ದೊಣ್ಣೆ ಮತ್ತು ಕಲ್ಲಿನಿಂದ ರೂಪೇಶ್‌ಕುಮಾರ್ ಮೇಲೆ ಕುಶಾಲ್ ಮತ್ತು ಸೋಮಶೇಖರ್ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಆರೋಪಿಗಳ ಪತ್ತೆಗಾಗಿ ಭದ್ರಾವತಿ ಟೌನ್ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಹಳೆನಗರ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ತಂಡ ರಚನೆ ಮಾಡಲಾಗಿತ್ತು. ಎರಡು ದಿನಗಳ ಬಳಿಕ ಆರೋಪಿಗಳು ಸೆರೆ ಸಿಕ್ಕಿದ್ದಾರೆ. ಭದ್ರಾವತಿ ಹಳೇನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಟೋ ಚಾಲಕನ ಹತ್ಯೆ ಮಾಡಿದ್ದವರ ಸೆರೆ
You Might Also Like
ಮನೆಯಲ್ಲೇ ತಯಾರಿಸಿಕೊಳ್ಳಿ ಕೂದಲು ಸಂರಕ್ಷಣೆಯ ಶುದ್ಧ ತೈಲ
ಸದೃಢವಾದ, ಹೊಳೆಯುವ, ನೀಳ ಕೂದಲು ಬೇಕೆಂಬ ಆಸೆ ತುಂಬಾ ಜನರಿಗೆ ಇದ್ದೇ ಇರುತ್ತದೆ. ಜೊತೆಗೆ ಕೂದಲು…
Chanakya Niti: ದಾಂಪತ್ಯ ಜೀವನ ಸುಂದರವಾಗಿರಲು 4 ವಿಷಯಗಳನ್ನು ಅನುಸರಿಸಿ….
ಬೆಂಗಳೂರು: ವಿದ್ವಾಂಸರಲ್ಲಿ ಚಾಣಕ್ಯರು ( Chanakya Niti ) ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…
Tamarind Juice : ಹುಣಸೆ ಹಣ್ಣಿನ ರಸದ ಅದ್ಭುತ ಪ್ರಯೋಜನಗಳಿವು…
ಬೆಂಗಳೂರು: ಹುಣಸೆಹಣ್ಣು ಭಾರತೀಯ ಪಾಕಪದ್ಧತಿಯಲ್ಲಿ ಬಳಸುವ ಪದಾರ್ಥಗಳಲ್ಲಿ ಒಂದಾಗಿದೆ. ಹುಣಸೆಹಣ್ಣು ಸ್ವಲ್ಪ ಸಿಹಿ ಮತ್ತು ಸ್ವಲ್ಪ…