More

    ಭದ್ರಾವತಿಯಲ್ಲಿ ಮೊದಲ ಒಮಿಕ್ರಾನ್ ದೃಢ

    ಶಿವಮೊಗ್ಗ: ಜಿಲ್ಲೆಯಲ್ಲೂ ಕರೊನಾ ರೂಪಾಂತರಿ ಮೊದಲ ಒಮಿಕ್ರಾನ್ ವೈರಸ್ ಭದ್ರಾವತಿಯಲ್ಲಿ ಪತ್ತೆಯಾಗಿದೆ. ಖಾಸಗಿ ನರ್ಸಿಂಗ್ ಕಾಲೇಜೊಂದರ 20 ವರ್ಷದ ವಿದ್ಯಾರ್ಥಿನಿಗೆ ಒಮಿಕ್ರಾನ್ ದೃಢಪಟ್ಟಿದೆ.
    ಡಿ.7ರಂದು ಭದ್ರಾವತಿ ಖಾಸಗಿ ನರ್ಸಿಂಗ್ ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಸೋಂಕಿತರ ಗಂಟಲ ದ್ರವವನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ಭಾನುವಾರ ರಾತ್ರಿ ಪರೀಕ್ಷೆಯ ವರದಿ ಬಂದಿದ್ದು ಈ ಪೈಕಿ ವಿದ್ಯಾರ್ಥಿನಿಯಲ್ಲಿ ಸೋಂಕು ದೃಢಪಟ್ಟಿದೆ. ಭಾನುವಾರ ರಾಜ್ಯದಲ್ಲಿ ಐವರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು ಈ ಪೈಕಿ ಭದ್ರಾವತಿಯ 20 ವರ್ಷದ ಯುವತಿಯೂ ಒಬ್ಬಳಾಗಿದ್ದಾಳೆ. ಈ ಸಂಬಂಧ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರೇ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
    ಪರೀಕ್ಷೆ ಬರೆಯುವುದಕ್ಕಾಗಿ ಕೇರಳದಿಂದ ನರ್ಸಿಂಗ್ ವಿದ್ಯಾರ್ಥಿನಿಯರು ಭದ್ರಾವತಿಗೆ ಬಂದಿದ್ದರು. 50ಕ್ಕೂ ಅಧಿಕ ವಿದ್ಯಾರ್ಥಿನಿಯರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದಾಗ 27 ಮಂದಿಗೆ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಒಮಿಕ್ರಾನ್ ಆತಂಕದಿಂದ ಹಲವರ ಮಾದರಿಯನ್ನು ಬೆಂಗಳೂರಿಗೆ ರವಾನಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts