22.8 C
Bengaluru
Saturday, January 18, 2020

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಮೈದಾನ ಸಾಕ್ಷಿಯಾಯಿತು.

ಸೋಂದಾ ಸ್ವರ್ಣವಲ್ಲಿ ಶ್ರೀ, ಸಿರಿಗೆರೆಯ ತರಳಬಾಳು ಶ್ರೀ, ಕಬೀರಾನಂದಾಶ್ರಮದ ಶಿವಲಿಂಗಾನಂದ ಶ್ರೀಗಳ ಸಮ್ಮುಖದಲ್ಲಿ ಐದು ಸಾವಿರಕ್ಕೂ ಹೆಚ್ಚು ಕಂಠಗಳು ಏಕ ಸ್ವರದಲ್ಲಿ ಭಗವದ್ಗೀತೆ ಪಠಿಸಿದವು.

ತಿಂಗಳ ಕಾಲ ಶಾಲೆ, ಮನೆ, ದೇಗುಲ ಸೇರಿ 1050ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಸಾಮೂಹಿಕವಾಗಿ ಭಗವದ್ಗೀತೆ ಕಲಿತವರೆಲ್ಲ ಪಾಲ್ಗೊಂಡು 24 ಶ್ಲೋಕಗಳಿಗೆ ಧ್ವನಿಯಾದರು. ಭಗವದ್ಗೀತೆಯ ಆಶಯ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಿದರು.

ನೈತಿಕ ಪುನರುತ್ಥಾನ, ವ್ಯಕ್ತಿತ್ವ ವಿಕಸನ, ಸಾಮಾಜಿಕ ಸಾಮರಸ್ಯ, ರಾಷ್ಟ್ರೀಯ ಏಕತೆಗೆ ಗೀತೆಯನ್ನು ಪಠ್ಯದಲ್ಲಿ ಅಳವಡಿಸಬೇಕು, ಸಾರ್ವತ್ರಿಕವಾಗಿ ಗೀತಾ ಜಯಂತಿಯನ್ನು ಆಚರಿಸಬೇಕೆಂಬ ಸಂದೇಶ ವ್ಯಕ್ತವಾಯಿತು.

ಮನಸ್ಸಿನ ಸ್ವಾಸ್ಥ್ಯ್ಕೆ ಗೀತೆ ಪಠಣ: ಆಶೀರ್ವಚನ ನೀಡಿದ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ, ಮನಸ್ಸಿನ ಸ್ವಾಸ್ಥ್ಯ್ಕೆ ನಿತ್ಯ ಗೀತೆ ಪಠಣ ಮಾಡಬೇಕು. ಭಾರತೀಯ ಧರ್ಮದ ಆತ್ಮ ಅಧ್ಯಾತ್ಮ, ಇದರ ಆತ್ಮ ಗೀತೆ. ಬ್ರಹ್ಮ ಸೂತ್ರ, ಉಪನಿಷತ್​ಗಳಂತೆ ಕ್ಲಿಷ್ಟವಾಗಿರದೆ ಸರಳವಾಗಿ ನಮ್ಮೆಲ್ಲ ತುಮುಲಗಳಿಗೆ ಗೀತೆ ಪರಿಹಾರ ಸೂಚಿಸುತ್ತದೆ ಎಂದರು. ಯಾತ್ರೆ ವೇಳೆ ಗೀತೆ ಪಠಿಸುತ್ತಿದ್ದೆ ಎಂಬ ಗಗನಯಾನಿ ಸುನೀತಾ ವಿಲಿಯಂರ ಹೇಳಿಕೆಯನ್ನು ಶ್ರೀಗಳು ಉದಾಹರಿಸಿದರು.

ಕ್ರಿ. ಪೂ.3138ರಲ್ಲಿ ಕೃಷ್ಣ ಅರ್ಜುನನಿಗೆ ಗೀತೆ ಉಪದೇಶಿಸಿದ. ನಾವೀಗ 5159ನೇ ಜಯಂತಿ ಆಚರಿಸುತ್ತಿದ್ದೇವೆ. ಶ್ರೀಮಠ 2007ರಿಂದ ಆರಂಭಿ ಸಿದ ಅಭಿಯಾನ ರಾಜ್ಯಾದ್ಯಂತ ವಿಸ್ತರಿಸಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹೊಸದುರ್ಗದ ಇಸ್ಮಾಯಿಲ್ ಸೇರಿ ಅನೇಕರು ಯಶಸ್ವಿಗೆ ಶ್ರಮಿಸಿದ್ದಾರೆ ಎಂದು ಹೇಳಿದರು.

ಮಕ್ಕಳಿಗೆ ಗೀತಾಮೃತ: ಗೀತಾಂತರಂಗ-3 ನೇ ಸಂಪುಟದ ಇಂಗ್ಲಿಷ್ ಅವತರಣಿಕೆ ಬಿಡುಗಡೆ ಮಾಡಿ ಮಾತನಾಡಿದ ಸಿರಿಗೆರೆ ತರಳಬಾಳು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಅಂದು ಕುರುಕ್ಷೇತ್ರದಲ್ಲೂ ಧರ್ಮವಿತ್ತು. ಆದರಿಂದು ಧರ್ಮದಲ್ಲಿ ಕುರುಕ್ಷೇತ್ರವಿದೆ. ಪ್ರಸ್ತುತ ಏನೆಲ್ಲ ನಡೆಯುತ್ತಿದೆ ಎಂಬುದನ್ನು ನೋಡುತ್ತಿದ್ದೇವೆ. ರಣರಂಗದಲ್ಲಿ ಉಪದೇಶ ಹೇಗೆ ಸಾಧ್ಯವೆಂದು ಕೇಳುವ ಮೂಲಕ ಗೀತೆಯನ್ನು ಟೀಕಿಸುವ ಅಜ್ಞಾನಿಗಳ ಬಗ್ಗೆ ಮರುಕವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಅಭಿಯಾನ ನಡೆದಿದ್ದು ನಮ್ಮ ಜಿಲ್ಲೆಯ ಪುಣ್ಯ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಬಣ್ಣಿಸಿದರು. ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸಬೇಕೆಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಒತ್ತಾಯಿಸಿದರು.

ನಿವೃತ್ತ ನ್ಯಾಯಮೂರ್ತಿ ಬಿಲ್ಲಪ್ಪ ಅವರನ್ನು ಸನ್ಮಾನಿಸಲಾಯಿತು. ಅಭಿಯಾನ ಜಿಲ್ಲಾ ಸಮಿತಿ ಅಧ್ಯಕ್ಷ ಎಸ್.ಆರ್.ಲಕ್ಷ್ಮೀಕಾಂತ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕೂಡಲಿ ಶೃಂಗೇರಿ ಮಠದ ಸಚ್ಚಿದಾನಂದ ಸ್ವಾಮೀಜಿ, ಶಿರಸಿ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನದ ಉಪಾಧ್ಯಕ್ಷ ಜಿ.ಎನ್.ಹೆಗಡೆ, ಸ್ವರ್ಣವಲ್ಲೀ ಮಠದ ಅಧ್ಯಕ್ಷ ವಿಜ್ಞೇಶ್ವರ ನ.ಹೆಗಡೆ, ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನೃತ್ಯರೂಪಕ ಹಾಗೂ ಸಮಗ್ರ ಗೀತಾ ಪಾರಾಯಣ ಜರುಗಿತು.

ಚಿತ್ರದುರ್ಗ ಜಿಲ್ಲೆಯ ಜ್ಞಾನವಂತರು ಅಧ್ಯಾತ್ಮದೆಡೆ ತಿರುಗಲು ಶ್ರೀಗಳು ಕೃಷ್ಣನ ಸಂದೇಶವನ್ನು ಜಿಲ್ಲೆಗೆ ತಂದಿದ್ದಾರೆ. ಅಸುರ ಗುಣ ತೊಲಗಿ ಒಳ್ಳೆಯದು ವಿಜೃಂಭಿಸಲಿ.

| ಶ್ರೀ ಶಿವಲಿಂಗಾನಂದ ಸ್ವಾಮೀಜಿ ಶ್ರೀ ಕಬೀರಾನಂದಾಶ್ರಮ

ಸಾರ್ವತ್ರಿಕವಾಗಿ ಆಚರಿಸಿ

ಗೀತಾ ಜಯಂತಿಯನ್ನು ಸಾರ್ವತ್ರಿಕವಾಗಿ ಆಚರಿಸಲು ಸ್ವರ್ಣವಲ್ಲೀ ಶ್ರೀಗಳು ಸರ್ಕಾರಕ್ಕೆ ಸಲಹೆ ನೀಡಿದರು. ಆಡಳಿತಕ್ಕೆ ಸಂವಿಧಾನ ಪ್ರಮುಖವಾದರೆ, ಗೀತೆ ನಮ್ಮ ಜೀವನದ ಸಂವಿಧಾನ. ಗೀತೆ ತಪ್ಪು ದಾರಿಯನ್ನೇ ತುಳಿಯ ದಂತೆ ನೋಡಿಕೊಳ್ಳುತ್ತದೆ. ಹದಗೆಟ್ಟಿರುವ ಮನಸ್ಸುಗಳನ್ನು ಹದಕ್ಕೆ ತಂದರೆ ವೈಯಕ್ತಿಕ, ಸಾಮಾಜಿಕ ಸುಧಾರಣೆ ಸಾಧ್ಯ ಎಂದರು.

ಸ್ವರ್ಣವಲ್ಲೀ ಶ್ರೀಗಳು ಚಿತ್ರದುರ್ಗ ಜಿಲ್ಲೆಯ ಮಕ್ಕಳಿಗೆ ಗೀತಾಮೃತ ಬಡಿಸಿದ್ದಾರೆ. ಉಪನಿಷತ್​ಗಳ ಸಾರ ಗೀತೆಯಲ್ಲಿದೆ. ಇದು ಕೇವಲ ಕಂಠಸ್ಥವಾಗದೇ, ಹೃದಯದಲ್ಲಿ ಹಾಸುಹೊಕ್ಕಾಗಬೇಕು.

| ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಿರಿಗೆರೆ ತರಳಬಾಳು ಬೃಹನ್ಮಠ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...