ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್ ವಲಯ 8, ಜಿನ ಭಜನಾ ಸೀಸನ್ 8 ಇದರ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಶ್ರೀ ಮಂಜುನಾಥ ಸ್ವಾಮಿ ಕಲಾ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು.
ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್, ಸೋನಿಯಾ ಯಶೋವರ್ಮ, ಪೂರನ್ ವರ್ಮ, ವಿಭಾಗ ಕಾರ್ಯದರ್ಶಿ ಸುಭಾಶ್ಚಂದ್ರ, ವೇಣೂರು ತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ಬಿ.ಸೋಮಶೇಖರ್ ಶೆಟ್ಟಿ, ವೀರ್ ಪ್ರಮೋದ್ ಕುಮಾರ್, ರಾಜಶ್ರೀ ಸುದರ್ಶನ್ ಮತ್ತು ತ್ರಿಶಾಲ ಉದಯಕುಮಾರ್ ಮಲ್ಲ, ರಜತ ಪಿ.ಶೆಟ್ಟಿ, ಪೂರ್ವಾಧ್ಯಕ್ಷರು ಉಪಸ್ಥಿತರಿದ್ದರು.
ಡಾ.ನವೀನ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಚಿ ನಿಖಿತ್ ಕುಮಾರ್, ಧೀಮತಿ ಮಹಿಳಾ ಸಮಾಜದ ಸದಸ್ಯೆಯರು ಭಾಗವಹಿಸಿದ್ದರು.