

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಭಜನಾ ಕಮ್ಮಟದಿಂದ ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿ ಅನಾವರಣವಾಗಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಧರ್ಮಸ್ಥಳದಲ್ಲಿ ಭಾನುವಾರ 27ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಧರ್ಮ ಮತ್ತು ಸಂಸ್ಕೃತಿ ಉಳಿದರೆ ಮಾತ್ರ ದೇಶ ಉಳಿಯುತ್ತದೆ. ಸನಾತನ ಧರ್ಮ ಮತ್ತು ಸಂಸ್ಕೃತಿಯ ಪುನರುತ್ಥಾನದೊಂದಿಗೆ ಏಕತೆ ಮತ್ತು ಏಕಾಗ್ರತೆ ಸಾಧಿಸಲು ಭಜನೆ ಪ್ರೇರಕ ಶಕ್ತಿಯಾಗಿದೆ ಎಂದರು.
ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹನಾಯಕ್ ಶುಭಾಶಂಸನೆ ಮಾಡಿದರು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ಕೃಷ್ಣ ಪೂಜಾರಿ ಮತ್ತು ನೆಲ್ಯಾಡಿಯ ಭವಿಷ್ಯ ಕಮ್ಮಟದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.
ಕಮ್ಮಟದ ಕಾರ್ಯದರ್ಶಿ ಎ.ವಿ.ಶೆಟ್ಟಿ ವರದಿ ವಾಚಿಸಿದರು. ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಚಂದ್ರಶೇಖರ ಸಾಲ್ಯಾನ್ ವಂದಿಸಿದರು. ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು. ವಿದುಷಿ ಚೈತ್ರಾ ನಿರ್ದೇಶನದಲ್ಲಿ ನೃತ್ಯ ಭಜನೆ ಮತ್ತು ಕುಣಿತ ಭಜನೆ ವಿಶೇಷ ಗಮನ ಸೆಳೆಯಿತು.
ಮಹಿಳೆಯರು ಮತ್ತು ಮಕ್ಕಳು ಭಜನೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತೋಷ ತಂದಿದೆ. ಭಜನಾಪಟುಗಳು ಪರಸ್ಪರ ಪ್ರೀತಿ, ವಿಶ್ವಾಸದೊಂದಿಗೆ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ಡಾ.ಡಿ.ವೀರೇಂದ್ರ ಹೆಗ್ಗಡೆ ಧರ್ಮಾಧಿಕಾರಿ, ಶ್ರೀಕ್ಷೇತ್ರ ಧರ್ಮಸ್ಥಳ ಭಜನೆ ಮತ್ತು ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದ್ದು, ದೃಢ ಭಕ್ತಿಯಿಂದ ಭಜನೆ ಮಾಡಿದಾಗ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ರಾಮಾಯಣ, ಮಹಾಭಾರತದ ಕಥೆಗಳಿಂದ ನಮ್ಮ ಸಾರ್ಥಕ ಬದುಕಿಗೆ ಮಾರ್ಗದರ್ಶನ ಸಿಗುತ್ತಿದೆ. ಭಜನಾ ಕಮ್ಮಟ ಮೂಲಕ ಡಾ.ಹೆಗ್ಗಡೆಯವರು ಹಿಂದು ಸಮಾಜದ ಸಂಘಟನೆ ಮತ್ತು ಬಲವರ್ಧನೆಗೆ ಅಮೂಲ್ಯ ಕೊಡುಗೆ ನೀಡುತ್ತಿದ್ದಾರೆ. ಭಜನೆಯಿಂದ ಸಾತ್ವಿಕ ಶಕ್ತಿ ಜಾಗೃತಗೊಂಡು ಭಯ, ದ್ವೇಷ ದೂರವಾಗಿ ಪ್ರೀತಿ, ವಿಶ್ವಾಸ ಮೂಡಿ ಬಂದು ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ. ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು