

ಕಡಬ: ಯುವ ಜನಾಂಗದವರವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಜನಾ ಮಂಡಳಿಗಳಲ್ಲಿ ಸೇರಿಸಿಕೊಂಡು ಸನಾತನ ಸಂಸ್ಕೃತಿ ಉಳಿಸುವ ಕೆಲಸವಾಗಬೇಕು ಎಂದು ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತ್ಯನಾರಾಯಣ ಹೆಗಡೆ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಭೆಯಲ್ಲಿ ಮಾತನಾಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ, ತಾಲೂಕಿನ ಭಜನಾ ಪರಿಷತ್ ಸಮಾಜದಲ್ಲಿ ಇನ್ನಷ್ಟು ಹೊಸ ಭಜನಾ ತಂಡಗಳನ್ನು ಕಟ್ಟಿ ಬೆಳೆಸುವುದರ ಜತೆಗೆ ಧಾರ್ಮಿಕ ನಂಬಿಕೆಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದರು.
ಭಜನಾ ಪರಿಷತ್ ಸಮನ್ವಯಾಧಿಕಾರಿ ಸಂತೋಷ್, ಸೆಪ್ಟೆಂಬರ್ 14ರಿಂದ 21ರವರೆಗೆ ಧರ್ಮಸ್ಥಳದಲ್ಲಿ ನಡೆಯುವ ಭಜನಾ ಕಮ್ಮಟದ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಂದರ್ ಗೌಡ ಒಗ್ಗು ಅಧ್ಯಕ್ಷತೆ ವಹಿಸಿದ್ದರು. ಕಡಬ ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಕಾರ್ಯಕ್ರಮ ನಿರ್ವಹಿಸಿದರು.