More

    ಅಂಡರ್ ಪಾಸ್ ನಿರ್ಮಿಸುವಂತೆ ಪಟ್ಟು

    ಭರಮಸಾಗರ: ರಾಷ್ಟ್ರೀಯ ಹೆದ್ದಾರಿ 4ರ ಬಳಿಯ ವಿಜಾಪುರ, ಕಿಟ್ಟದಹಟ್ಟಿ ಗ್ರಾಮದ ಬಳಿ ಅಂಡರ್ ಪಾಸ್ ನಿರ್ಮಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.

    ಮೂರು ಸಾವಿರ ಜನಸಂಖ್ಯೆ ಇರುವ ಕಿಟ್ಟದಹಟ್ಟಿ ಹಾಗೂ ವಿಜಾಪುರ ಗ್ರಾಮಸ್ಥರು ಕೃಷಿ, ಹಾಲು ಉತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಲ್ಲಿ 600ಕ್ಕೂ ಹೆಚ್ಚು ಹಸುಗಳಿದ್ದು, ಕೃಷಿ ಚಟುವಟಿಕೆಗೆ ತೆರಳಲು ಅನುಕೂಲವಾಗುವಂತೆ ಹೆದ್ದಾರಿಯಲ್ಲಿ ಸೂಕ್ತ ಕೆಳ ಸೇತುವೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

    ಗ್ರಾಮಗಳಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ. ರಸ್ತೆ ಅಪಘಾತಗಳು ಉಂಟಾಗಿ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇಂತಹ ದೊಡ್ಡ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಕನಿಷ್ಠ ನೂರು ವರ್ಷಗಳಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸುವ ಮುಂದಾಲೋಚನೆ ವಹಿಸಬೇಕು ಎಂದು ಆಗ್ರಹಿಸಿದರು.

    4 ಗಂಟೆಗಳ ಕಾಲ ಪ್ರತಿಭಟನೆ ನಡೆಸಿ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಸ್ಥಳಕ್ಕೆ ತಹಸೀಲ್ದಾರ್ ವೆಂಕಟೇಶಯ್ಯ ಆಗಮಿಸಿ ಮನವಿ ಸ್ವೀಕರಿಸಿದರು.

    ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಬೇಡರೆಡ್ಡಿ ಬಸವರೆಡ್ಡಿ, ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ.ಜಿ.ಸುರೇಶ್‌ಬಾಬು, ಉಪಾಧ್ಯಕ್ಷ ಕೊಟ್ರಬಸಪ್ಪ, ತಾಲೂಕಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಎಂ.ಬಿ.ತಿಪ್ಪೇಸ್ವಾಮಿ, ಕೆ.ಸಿ.ಹೊರಕೇರಪ್ಪ, ಕೋಗುಂಡೆ ರವಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಬಸವನಶಿವನಕೆರೆ ಚಂದ್ರಪ್ಪ, ಎಮ್ಮೇಹಟ್ಟಿ ಕೆಂಚೆಲ್ಲಪ್ಪ, ರೇವಣ್ಣ, ಇಸಾಮುದ್ರ ಪ್ರಭು, ಇಮಾಂಸಾಬ್, ಕೋಗುಂಡೆ ನಾಗರಾಜ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts