ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ

ಭರಮಸಾಗರ : ಸರ್ಕಾರಿ ಶಾಲೆಗಳನ್ನು ಮಕ್ಕಳನ್ನು ಆಕರ್ಷಿಸಲು ವಿಶೇಷ ದಾಖಲಾತಿ ಆಂದೋಲನ ಆರಂಭಿಸಿದ್ದು, ಸಾರ್ವಜನಿಕರು ಸಹಕರ ಅಗತ್ಯ ಎಂದು ಮುಖ್ಯಶಿಕ್ಷಕ ಮಹೇಶ್ ತಿಳಿಸಿದರು.

ಇಲ್ಲಿನ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ದಾಖಲಾತಿ ಆಂದೋಲನ ಹಾಗೂ ಶಾಲಾ ಆರಂಭೋತ್ಸವದಲ್ಲಿ ಮಾತನಾಡಿದರು.

ಪ್ರಸ್ತುತ ವರ್ಷದಿಂದ ಎಲ್‌ಕೆಜೆ, ಯುಕೆಜೆ ಹಾಗೂ 1ನೇ ತರಗತಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲಾಗಿದೆ. ಶಿಕ್ಷಕರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಮನೆಮನೆ ತೆರಳಿ ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.

ಸರ್ಕಾರಿ ಶಾಲೆಯಲ್ಲಿ ಪಠ್ಯಪುಸ್ತಕ, ಸಮವಸ್ತ್ರ, ಕ್ಷೀರಭಾಗ್ಯ, ಬಿಸಿಯೂಟ, ಶೂ-ಸಾಕ್ಸ್ ಉಚಿತವಾಗಿ ವಿತರಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುದ್ಧ ಕುಡಿವ ನೀರು, ಗ್ರಂಥಾಲಯ, ಪ್ರಯೋಗಾಲಯ, ಕಂಪ್ಯೂಟರ್, ಸ್ಮಾರ್ಟಕ್ಲಾಸ್ ಶಿಕ್ಷಣ, ಯೋಗ, ನೈತಿಕ ಶಿಕ್ಷಣದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಶತಮಾನ ಸಂಭ್ರಮದ ಸಮೀಪದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಉತ್ತಮ ಕಲಿಕೆ ವಾತಾವರಣವಿದ್ದು, ಪಾಲಕರು ತಮ್ಮ ಮಕ್ಕಳನ್ನು ದಾಖಲಿಸಬೇಕು ಎಂದು ಮನವಿ ಮಾಡಿದರು.

ಸಿಆರ್‌ಪಿ ರಾಜೇಶ್ವರಿ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *