More

    ಸರ್ವರ ಆರೋಗ್ಯಕ್ಕಾಗಿ ಆಯುಷ್ಮಾನ್ ಜಾರಿ

    ಭರಮಸಾಗರ: ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಮತ್ತು ಕೇಂದ್ರದ ಆಯುಷ್ಮಾನ್ ಭಾರತ್ ಯೋಜನೆಗಳೆರಡನ್ನೂ ಸಂಯೋಜಿತಗೊಳಿಸಿದ್ದು, ಇದರಡಿ ರಾಜ್ಯದ ಎಲ್ಲ ಕುಟುಂಬಗಳಿಗೂ ಆರೋಗ್ಯ ಸೇವೆ ದೊರೆಯಲಿದೆ ಎಂದು ಟಿಎಚ್‌ಒ ಡಾ.ಗಿರೀಶ್ ತಿಳಿಸಿದರು.

    ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಆಯುಷ್ಮಾನ್ ಕರ್ನಾಟಕ ಯೋಜನೆ ಕುರಿತ ಮಾಹಿತಿ ಹಾಗೂ ಆರೋಗ್ಯ ಕಾರ್ಡ್ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಎಲ್ಲ ವರ್ಗದವರಿಗೂ ಉಚಿತ ಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷಿ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (ಎಬಿ-ಎಆರ್‌ಕೆ) ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಇದರಡಿ ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ರೂ. ಹಾಗೂ ಎಪಿಎಲ್ ಕುಟುಂಬಗಳಿಗೆ 1.50 ಲಕ್ಷ ರೂ. ವರೆಗಿನ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ ಎಂದು ತಿಳಿಸಿದರು.

    ಆರೋಗ್ಯ ಕಾರ್ಡ್‌ಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತದೆ. ಇದನ್ನು ಪಡೆಯಲು ಫಲಾನುಭವಿಗಳು ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್ ತೋರಿಸಿ 10 ರೂ. ಶುಲ್ಕ ಪಾವತಿಸಬೇಕು ಎಂದು ತಿಳಿಸಿದರು.

    ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್ ಮಾತನಾಡಿ, ಎಲ್ಲರೂ ಆಯುಷ್ಮಾನ್ ಕಾರ್ಡ್ ಪಡೆದುಕೊಳ್ಳಬೇಕು. ಇದು ಅನಾರೋಗ್ಯಕ್ಕೀಡಾದಾಗ ನೆರವಿಗೆ ಬರುತ್ತದೆ ಎಂದರು.

    ಹಿರಿಯ ಆರೋಗ್ಯ ಸಹಾಯಕ ಆಂಜನೇಯ, ತಿಪ್ಪಮ್ಮ, ನೇತ್ರಾಧಿಕಾರಿ ಡಾ.ರಜನಿ, ಆಶಾ ಕಾರ್ಯಕರ್ತೆಯರು, ಶಂಕರ ಕಣ್ಣಿನ ಆಸ್ಪತ್ರೆ ಸಿಬ್ಬಂದಿ ಅರುಣ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts