More

    ಇತಿಹಾಸ ಪುಟ ಸೇರಿದ ಭಾರತ್ ಜೋಡೋ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ ಹೇಳಿಕೆ

    ಮಂಡ್ಯ: ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುದೀರ್ಘ 3570 ಕಿ.ಮೀ ಸಾಗಿದ ಭಾರತ್ ಜೋಡೋ ಯಾತ್ರೆ ದೇಶದ ಇತಿಹಾಸದ ಪುಟ ಸೇರಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ ಹೇಳಿದರು.
    ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಭಾರತ್ ಜೋಡೋ ಯಾತ್ರೆ ಸಮಾರೋಪದ ಅಂಗವಾಗಿ ಕಾಂಗ್ರೆಸ್ ಧ್ವಜರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತ್ ಜೋಡೋ ಯಾತ್ರೆ ಹೊಸ ಮೈಲುಗಲ್ಲು ಸೃಷ್ಟಿಸಿದೆ. ಈ ಮೂಲಕ ಬಿಜೆಪಿ ಸರ್ಕಾರಗಳ ಜನವಿರೋದಿ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ತುಂಬಲಾಗಿದೆ ಎಂದು ತಿಳಿಸಿದರು.
    ಮಂಡ್ಯ ಜಿಲ್ಲೆಯ ನೆಲದಲ್ಲೂ ಭಾರತ ಜೋಡೋ ಯಾತ್ರೆ ನಡೆದಿತ್ತು. ವಿಭಿನ್ನ ಹವಾಮಾನಗಳ ವೈಪರಿತ್ಯ ಸವಾಲು, ರಾಜಕೀಯ ಎದುರಾಳಿಗಳ ಟೀಕೆ, ಷಡ್ಯಂತ್ರ, ಅಪಪ್ರಚಾರ ಸೇರಿದಂತೆ ಎಲ್ಲ ಅಡೆತಡೆಗಳನ್ನು ಮೀರಿ ಯಾತ್ರೆ ತನ್ನ ಗುರಿ ತಲುಪಿದೆ. ಇದು ಕಾಂಗ್ರೆಸ್ ಹಾಗೂ ಪಕ್ಷದ ನಾಯಕರಿಗೆ ದೇಶದ ಬಗ್ಗೆ ಇರುವ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಪ್ರತಿ ಮಹಿಳೆಗೆ ತಿಂಗಳಿಗೆ 2 ಸಾವಿರ ರೂ
    ನೀಡಲಾಗುವುದು ಎಂದರು.
    ಭಾರತ ಜೋಡೋದ ಸುದೀರ್ಘ ಪಾತ್ರಯಾತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದ್ಯಾವಪ್ಪ ಪಾಲ್ಗೊಂಡಿರುವ ಹಿನ್ನೆಲೆಯಲ್ಲಿ ಅವರ ಪತ್ನಿ ರೇಣುಕಾ ದ್ಯಾವಪ್ಪ ಧ್ವಜರೋಹಣ ನೇರವೇರಿಸಿದರು.
    ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಚ್.ಕೃಷ್ಣ, ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ವೆಂಕಟೇಶ್ ಹಳವಾಡಿ, ಅಸಂಘಟಿತ ಕಾರ್ಮಿಕ ಸಮಿತಿ ಅಧ್ಯಕ್ಷ ಗುರುರಾಜ್, ರಾಮಶೆಟ್ಟಿ, ವೀಣಾ, ಸುವರ್ಣವತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts