ಭಾರತ್ ಸ್ಕೌಟ್ಸ್-ಗೈಡ್ಸ್ ವಾರ್ಷಿಕ ಮಹಾಸಭೆ

Kdb_scaut
ಉಪ್ಪಿನಂಗಡಿ ಭಾರತ್ ಸ್ಕೌಟ್ಸ್-ಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯನ್ನು ಉದ್ಯಮಿ ಕೇಶವ ಅಮೈ ಕಾರ್ಯಕ್ರಮ ಉದ್ಘಾಟಿಸಿದರು. ಅಬ್ರಹಾಂ ವರ್ಗಿಸ್, ಪ್ರೇಮಾ, ಜನಾರ್ದನ ನೆಲ್ಯಾಡಿ ಮೊದಲಾದವರಿದ್ದರು.
Published on

ಕಡಬ: ಉಪ್ಪಿನಂಗಡಿ ಭಾರತ್ ಸ್ಕೌಟ್ಸ್-ಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ ಮತ್ತು ಪುನಶ್ಚೇತನ ಶಿಬಿರ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಯಿತು.

ಉದ್ಯಮಿ ಕೇಶವ ಅಮೈ ಉದ್ಘಾಟಿಸಿದರು. ಉಪ್ಪಿನಂಗಡಿ ಸ್ಥಳಿಯ ಸಂಸ್ಥೆ ಅಧ್ಯಕ್ಷ ಅಬ್ರಹಾಂ ವರ್ಗಿಸ್ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪ್ರೇಮಾ ವರದಿ ವಾಚಿಸಿದರು. ಕೋಶಾಧಿಕಾರಿ ಜನಾರ್ದನ ನೆಲ್ಯಾಡಿ ಆಯವ್ಯಯ ಮಂಡನೆ ಮತ್ತು ಮಂಜೂರಾತಿ ಪ್ರಕ್ರಿಯೆ ನಡೆಸಿಕೊಟ್ಟರು. ಜಿಲ್ಲಾ ಗಜೆಟ್ ಬಿಡುಗಡೆಗೊಳಿಸಲಾಯಿತು. ಸ್ಕೌಟ್ಸ್ ಜಿಲ್ಲಾ ಆಯುಕ್ತ ಬಿ.ಎಂ ತುಂಬೆ, ಕಾರ್ಯದರ್ಶಿ ಪ್ರತಿಮ್ ಕುಮಾರ್, ರಾಜ್ಯ ಸಂಘಟನಾ ಆಯುಕ್ತ ಭಾರತ್ ರಾಜ್ ಸೂಚನೆ ನೀಡಿದರು. ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ಎಸ್.ಹನುಮಂತಯ್ಯ ಉಪಸ್ಥಿತರಿದ್ದರು.

ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ಕಾರ್ಯದರ್ಶಿ ಕೆ.ಸೇಸಪ್ಪ ರೈ, ನೋಡೆಲ್ ಅಧಿಕಾರಿಯಾಗಿ ಪ್ರಭಾರ ಕ್ರೀಡಾ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಜತೆ ಕಾರ್ಯದರ್ಶಿಗಳಾಗಿ ಉದ್ಯಮಿ ಕೇಶವ ಅಮೈ, ನೂಜಿಬಾಳ್ತಿ ತೆಗರ್ ತುಳುಕೂಟ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ, ದೇವಿ ಪ್ರಸಾದ್, ಶಿವಪ್ರಸಾದ್ ಇಜ್ಜಾವು, ವೆಂಕಟರಮಣ ಭಟ್ ನೆಲ್ಯಾಡಿ, ವಿಜಯಲಕ್ಷ್ಮೀ ಪ್ರಭು ಅವರನ್ನು ಆಯ್ಕೆ ಮಾಡಲಾಯಿತು.

ಅಬ್ರಾಹಂ ವರ್ಗಿಸ್ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ವಂದನಾ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಬಾರಿಂಜ ಉಪಸ್ಥಿತರಿದ್ದರು. ವೆಂಕಟ್ರಮಣ ನೆೆಲ್ಯಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರೇಮ ವಂದಿಸಿದರು. ಸ್ಕೌಟ್ಸ್ ಶಿಕ್ಷಕ ಕಿಶೋರ್ ಕುಮಾರ್ ಬಿ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net