

ವಿಜಯವಾಣಿ ಸ್ದುದಿಜಾಲ ಮೂಡುಬಿದಿರೆ
ದೇಶದ ಮುಂದಿನ ಪ್ರಜೆಗಳಿಗೆ ಸಮೃದ್ಧ ಮತ್ತು ಸಮರ್ಥ ಕರ್ನಾಟಕ ಕಟ್ಟುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮವಿದು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.
30ನೇ ಆಳ್ವಾಸ್ ವಿರಾಸತ್ ಪ್ರಯುಕ್ತ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ ರೇಂಜರ್ಸ್ ಸಾಂಸ್ಕೃತಿಕ ಉತ್ಸವ- 2024ರ ಸಮಾರೋಪ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
ಸಂಸ್ಥೆಯಿಂದ ಕೈಗೊಂಡಿರುವ ಪ್ರೇರಣಾ ಕಾರ್ಯಕ್ರಮ ಹೆಣ್ಣು ಮಕ್ಕಳಿಗೆ ಪೂರಕವಾಗಿ ಸ್ವಚ್ಛತೆ, ಜ್ಞಾನ ಮಟ್ಟವನ್ನು ಹೆಚ್ಚಿಸಲು ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದೆ. ಇಂತಹ ಕಾರ್ಯಕ್ರಮ ರಾಜ್ಯದ ವಿವಿಧ ಭಾಗಗಳಲ್ಲಿಯೂ ಸವಿಸ್ತಾರವಾಗಿ ಮುಂದುವರಿಯಬೇಕು. ಪ್ರತಿ ಜಿಲ್ಲೆಯಲ್ಲೂ ಸರ್ವೀಸ್ ಕ್ಯಾಂಪ್ಗಳನ್ನೂ ಹೆಚ್ಚೆಚ್ಚು ಆಯೋಜಿಸಬೇಕು ಎಂದು ಸಲಹೆ ನೀಡಿದರು.
ಶಿಬಿರದ ಮೇಲ್ವಿಚಾರಕಿ ಮಲ್ಲೇಶ್ವರಿ ಜೂಜಾರೆ ಮತ್ತು ನಿತಿನ್ ಅಮೀನ್, ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ, ಮೈಸೂರು ವಿಭಾಗ ಸಹಾಯಕ ರಾಜ್ಯ ಆಯುಕ್ತ ಬಸವರಾಜ್, ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತೆ ವಿಮಲಾ ರಂಗಯ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಕುಮಾರ್, ರಾಜ್ಯ ಸಂಘಟನಾ ಅಯುಕ್ತ ಪ್ರಭಾಕರ್ ಭಟ್, ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತ ಬಿ.ಎಂ.ತುಂಬೆ ಉಪಸ್ಥಿತರಿದ್ದರು.
ಶಿಬಿರದಲ್ಲಿ ಭಾಗಿಯಾದ ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳು ತಮ್ಮ ಶಿಬಿರದ ಅನಿಸಿಕೆ ವ್ಯಕ್ತಪಡಿಸಿದರು. ಶಿಬಿರದ ಯಶಸ್ಸಿಗೆ ಸಹಕರಿಸಿದವರನ್ನು ಹಾಗೂ ಪ್ರತಿ ಜಿಲ್ಲೆಯ ಪ್ರತಿನಿಧಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಮಕ್ಕಳಲ್ಲಿ ಸಾಂಸ್ಕೃತಿಕ, ಕ್ರೀಡೆ, ಕಲೋತ್ಸವ ಮತ್ತು ಪ್ರಕೃತಿ ಅಧ್ಯಯನಕ್ಕೆ ಹೆಚ್ಚು ಮಹತ್ವ ಸಿಗಬೇಕಿದೆ. ಈ ರೀತಿಯ ಸಾಂಸ್ಕೃತಿಕ ಉತ್ಸವದಲ್ಲಿ ಸಾಹಸಮಯ ಕ್ರೀಡೆಗಳನ್ನು ಆಯೋಜಿಸಿದ್ದರಿಂದ, ಸೇನೆಗೆ ಪ್ರವೇಶಿಸುವ ಆಕಾಂಕ್ಷಿಗಳಿಗೆ ಉತ್ತಮ ಮೂಲ ವೇದಿಕೆಯನ್ನು ಕಲ್ಪಿಸಿದಂತಾಗುತ್ತದೆ. ಪಿ.ಜಿ.ಆರ್.ಸಿಂಧ್ಯಾ, ರಾಜ್ಯ ಮುಖ್ಯ ಆಯುಕ್ತರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ https://www.vijayavani.net/attack-5 https://www.vijayavani.net/kori-jathre