ಭರತನಾಟ್ಯ ಕಲಾವಿದೆ, ಪದ್ಮ ಪ್ರಶಸ್ತಿ ಪುರಷ್ಕೃತೆ ಯಾಮಿನಿ ಕೃಷ್ಣಮೂರ್ತಿ ಇನ್ನಿಲ್ಲ

ನವದೆಹಲಿ: ಖ್ಯಾತ ಭರತನಾಟ್ಯ ಕಲಾವಿದೆ, ಪದ್ಮ ಪ್ರಶಸ್ತಿ ಪುರಷ್ಕೃತೆ ಯಾಮಿನಿ ಕೃಷ್ಣಮೂರ್ತಿ ನಿಧನರಾಗಿದ್ದಾರೆ.  ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶನಿವಾರ ಕೊನೆಯುಸಿರೆಳೆದಿದ್ದಾರೆ.

ಯಾಮಿನಿ ಕೃಷ್ಣಮೂರ್ತಿ 84 ವರ್ಷ.  ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕಳೆದ 7 ತಿಂಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಮ್ಯಾನೇಜರ್ ಹಾಗೂ ಕಾರ್ಯದರ್ಶಿಯಾಗಿದ್ದ ಗಣೇಶ್ ಮಾಹಿತಿ ನೀಡಿದ್ದಾರೆ.

ಕಲಾವಿದೆಯ ಮೃತ ದೇಹವನ್ನು ಅವರೇ ಸ್ಥಾಪಿಸಿರುವ ‘ಯಾಮಿನಿ ಸ್ಕೂಲ್ ಆಫ್‌ ಡ್ಯಾನ್ಸ್‌’ಗೆ ಭಾನುವಾರ ಬೆಳಗ್ಗೆ 9 ಗಂಟೆಗೆ ತಂದು ಅಂತಿಮ ದರ್ಶನಕ್ಕೆ ಇಡಲಾಗುತ್ತ

ರತ ನಾಟ್ಯ ಮತ್ತು ಕೂಚಿಪುಡಿ ನೃತ್ಯದ ಮೂಲಕ ಭಾರತದ ಕೀರ್ತಿಯನ್ನು ಖಂಡಗಳಿಗೆ ಪಸರಿಸಿದವರು ಯಾಮಿನಿ ಕೃಷ್ಣಮೂರ್ತಿ. ಯಾಮಿನಿ 1940 ರಲ್ಲಿ ಕೃಷ್ಣಮೂರ್ತಿ ದಂಪತಿಗಳಿಗೆ ಎಪಿಯ ಮದನಪಲ್ಲಿಯಲ್ಲಿ ಜನಿಸಿದರು. ಹುಣ್ಣಿಮೆಯ ದಿನ ಜನಿಸಿದ ಆಕೆಗೆ ಅಜ್ಜ ಯಾಮಿನಿ ಪೂರ್ಣಾ ತಿಲಕ ಎಂದು ಹೆಸರಿಟ್ಟರು.

ಯಾಮಿನಿ ಅವರಿಗೆ 1968ರಲ್ಲಿ ಪದ್ಮಶ್ರೀ, 2001ರಲ್ಲಿ ಪದ್ಮಭೂಷಣ ಮತ್ತು 2016ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಕೇಂದ್ರ ಸರಕಾರ ಗೌರವಿಸಿದೆ. ಈ ಹಿಂದೆ ಅವರು ಟಿಟಿಡಿಯ ಆಸ್ಥಾನ ನೃತ್ಯಗಾರ್ತಿಯಾಗಿಯೂ ಸೇವೆ ಸಲ್ಲಿಸಿದ್ದರು. ಅವರು ದೆಹಲಿಯಲ್ಲಿ ಯಾಮಿನಿ ಸ್ಕೂಲ್ ಆಫ್ ಡ್ಯಾನ್ಸ್ ಅನ್ನು ಸ್ಥಾಪಿಸಿದರು ಮತ್ತು ಅನೇಕ ಯುವಕರಿಗೆ ಭರತ ನಾಟ್ಯಂ ಮತ್ತು ಕೂಚಿಪುಡಿ ನೃತ್ಯದಲ್ಲಿ ತರಬೇತಿ ನೀಡಿದರು

Share This Article

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…

ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ