ಶತಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಭಾರವಿ ಶೆಟ್ಟಿ

hbr (2)
Published on

ಹೆಬ್ರಿ: ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸ ಸಮಿತಿ ಅಧ್ಯಕ್ಷರಾಗಿ ಪಡುಕುಡೂರು ಭಾರವಿ ಶೆಟ್ಟಿ ಹಾಗೂ ಸಂಚಾಲಕರಾಗಿ ಯುವ ಮುಖಂಡ ಪ್ರಸನ್ನ ಶೆಟ್ಟಿ ಜಯಲೀಲಾ ಅವರನ್ನು ನೇಮಕ ಮಾಡಲಾಗಿದೆ.

ಪ್ರಧಾನ ಕಾರ್ಯದರ್ಶಿಯಾಗಿ ಪಡುಕುಡೂರು ಶಾಲೆಯ ಮುಖ್ಯಶಿಕ್ಷಕ ಹರೀಶ ಪೂಜಾರಿ ಎಸ್.ಹಾಗೂ ಕೋಶಾಧಿಕಾರಿಯಾಗಿ ಸಂತೋಷ ಆಚಾರ್ಯ ಮಾವಿನಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.

ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು, ಗೌರವ ಸಲಹೆಗಾರರು, ಉಪಾಧ್ಯಕ್ಷರು, ಗೌರವ ಕಾರ್ಯದರ್ಶಿ, ಸಹ ಸಂಚಾಲಕರು, ಸಹ ಕೋಶಾಧಿಕಾರಿ, ಸಂಘಟನಾ ಕಾರ್ಯದರ್ಶಿ ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ. ಶತಮಾನೋತ್ಸವವನ್ನು ವೈಭವದಿಂದ ನಡೆಸಲು ಸಮಾಲೋಚನಾ ಸಭೆಯನ್ನು ಊರಿನ ಪ್ರಮುಖರು ಮತ್ತು ವಿಧ್ಯಾಭಿಮಾನಿಗಳ ಸಮ್ಮುಖದಲ್ಲಿ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net