

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದಾಗಿದ್ದು, ರೌಡಿಶೀಟರ್ ಮಹಾದೇವ ಸಾಹುಕಾರ ಭೈರಗೊಂಡ ಗಂಭೀರ ಗಾಯಗೊಂಡಿದ್ದಾರೆ.
ವಿಜಯಪುರ ಹೊರವಲಯದ ಭೂತನಾಳ ತಾಂಡಾ ಬಳಿ ಸೋಮವಾರ ಅಪರಿಚಿತರ ತಂಡ ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ಎರಡು ಸುತ್ತು ಗುಂಡಿನ ದಾಳಿ ನಡೆಸಿ ಪರಾರಿಯಾಗಿದೆ.
ಮೊದಲಿಗೆ ಮಹಾದೇವ ಸಾಹುಕಾರ ಸಂಚರಿಸುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಬಳಿಕ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ.
ಮಹಾದೇವ ಸಾಹುಕಾರ ಭೈರೊಗೊಂಡಗೆ 2 ಗುಂಡು ತಾಗಿದೆ. ಸಹಚರ ಬಾಬುರಾಯಗೂ ಗಂಭೀರ ಗಾಯವಾಗಿದೆ. ಇಬ್ಬರನ್ನೂ ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.