More

    ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿ ಎಫ್​ಐಆರ್​ ದಾಖಲಿಸುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ ಭೀಮ್​ಸೇನೆ

    ನವದೆಹಲಿ: ಪೌರತ್ವ ತಿದ್ದುಪಡಿ ಜಾರಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ದೂರುಗಳ ಆಧಾರದ ಮೇಲೆ ಎಫ್​ಐಆರ್​ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಭೀಮ್ ಸೇನೆಯ ಮುಖ್ಯಸ್ಥ ಚಂದ್ರಶೇಖರ್​ ಅಜಾದ್​ ಸುಪ್ರೀಂ ಕೊರ್ಟ್​ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.

    ಈಶಾನ್ಯ ದೆಹಲಿಯ ಜಾಫರಾಬಾದ್ ಮತ್ತು ಮೌಜ್‌ಪುರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗುಂಪು ಘರ್ಷಣೆ ಉಂಟಾಗಿ ಪೊಲೀಸ್​ ಮುಖ್ಯಪೇದೆ ಸೇರಿದಂತೆ 7 ಮಂದಿ ಬಲಿಯಾಗಿದ್ದಾರೆ. ಘರ್ಷಣೆಗೆ ಬಿಜೆಪಿ ಮುಖಂಡ ಕಪಿಲ್​ ಮಿಶ್ರಾ ಮಾಡಿದ ಭಾಷಣವೇ ಕಾರಣ ಹೀಗಾಗಿ ಸಲ್ಲಿಕೆಯಾಗಿರುವ ದೂರಿನ ಆಧಾರದ ಮೇಲೆ ಎಫ್​ಐಆರ್​ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಅವರು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

    ಈಶಾನ್ಯ ದೆಹಲಿಯಲ್ಲಿ ಶನಿವಾರ ರಾತ್ರಿಯಿಂದ ಪ್ರತಿಭಟನೆಗಳು ನಡೆಯುತ್ತಿವೆ. ಮೂರು ದಿನದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸಬೇಕು. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ದೆಹಲಿಯಲ್ಲಿ ಇದ್ದಾರೆ. ಹೀಗಾಗಿ ನಾವು ಸುಮ್ಮನೆ ಇದ್ದೇವೆ. ಅವರು ತೆರಳಿದ ನಂತರ ಪ್ರತಿಭಟನೆ ಹೀಗೆ ಮುಂದುವರಿದರೇ ನಾವು ಬೀದಿಗೆ ಇಳಿಯಬೇಕಾಗುತ್ತದೆ ಎಂದು ಕಪಿಲ್​ ಮಿಶ್ರಾ ಅವರು ವಿಡಿಯೋದಲ್ಲಿ ಮಾತನಾಡಿರುವ ಹಿನ್ನೆಲೆಯಲ್ಲಿ ಘರ್ಷಣೆ ಅಧಿಕವಾಗಿದೆ ಎಂದು ಚಂದ್ರಶೇಖರ್​ ಅಜಾದ್​ ಆರೋಪಿಸಿದ್ದಾರೆ.

    ಪ್ರತಿಭಟನೆ ನಡೆಸುತ್ತಿರುವವರಿಗೆ ಭದ್ರತೆ ಒದಗಿಸಬೇಕು ಎಂದು ಕೂಡ ಅಜಾದ್​ ಮನವಿ ಮಾಡಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts