More

    ಅವಹೇಳನಕಾರಿ ಹೇಳಿಕೆ; ಮಹಾರಾಷ್ಟ್ರ ಸಚಿವ ಚಂದ್ರಕಾಂತ್​ ಪಾಟೀಲ್ ಮೇಲೆ ಇಂಕ್ ಎಸೆತ

    ಮುಂಬೈ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇನಕಾರಿ ಹೇಳಿಕೆ ಹಾಗೂ ಗುತ್ತಿಗೆ ನೇಮಕಾತಿ ವಿಚಾರವಾಗಿ ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್​ ಮೇಲೆ ಭೀಮ್​ ಆರ್ಮಿ ಸದಸ್ಯರು ಇಂಕ್​ ಚೆಲ್ಲಿ ಆಕ್ರೋಶ ಹೊರಹಾಕಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದಿದೆ.

    ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಬಂಧಿತನನ್ನು ಅಜಯ್​ ಮೆಂಡರ್​ಗಿಕರ್​ ಎಂದು ತಿಳಿದು ಬಂದಿದೆ.

    ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಸೊಲ್ಲಾಪುರದಲ್ಲಿರುವ ಸರ್ಕಾರಿ ಗೆಸ್ಟ್​ಹೌಸ್​ಗೆ ಆಗಮಿಸುವ ಸಚಿವರನ್ನು ಭೇಟಿ ಮಾಡುವವರ ಸೋಗಿನಲ್ಲಿ ಬಂದ ವ್ಯಕ್ತಿಯೂ ಏಕಾಏಕಿ ಅವರ ಮೇಲೆ ದಾಳಿಗೆ ಯತ್ನಿಸಿದ್ದು, ಅವರ ಮೇಲೆ ಇಂಕ್​ ಎಸೆದಿದ್ದಾನೆ. ಕೂಡಲೇ ಅಲ್ಲಿದ್ದ ಪೊಲೀಸ್​ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದು, ಗುತ್ತಿಗೆ ಆಧಾರದಲ್ಲಿ ನೇಮಕಾತಿ, ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದನ್ನು ನೋಡಬಹುದಾಗಿದೆ.

    ಇದನ್ನೂ ಓದಿ: ಅಕ್ರಮವಾಗಿ ಜಲಗಡಿ ಪ್ರವೇಶಿಸಿದ ಆರೋಪ; ಭಾರತದ 27 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ

    ಸಚಿವರು ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಆತ ದಾಳಿ ಮಾಡಿರಬಹುದು ಎಂದು ಶಂಕಿಸಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕಳೆದ ಕೆಲವು ದಿನಗಳ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಕಾರ್ಯಕ್ರಮ ಒಂದರಲ್ಲಿ ಅವಹೇನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ಮಹಾರಾಷ್ಟ್ರದಲ್ಲಿ ವ್ಯಾಪಕ ಪ್ರತಿಭಟನೆ ನಡೆದಿದ್ದವು. ತಾವು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕೂಡಲೇ ಕ್ಷಮೆಯಾಚಿಸಿ ತಮ್ಮ ಸಚಿನ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷ ಸೇರಿದಂತೆ ಹಲವು ಸಂಘಟನೆಗಳು ಆಗ್ರಹಿಸಿದ್ದವು.

    ಧಂಗರ್ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಬೇಕೆಂದುಉ ಆಗ್ರಹಿಸಿ ಕಳೆದ ತಿಂಗಳು ಸಚಿವ ರಾಧಾಕೃಷ್ಣ ವಿಕೆ ಪಾಟೀಲ್​ ಮೇಲೆ ವ್ಯಕ್ತಿಯೊಬ್ಬರು ಭಂಡಾರ (ಅರಿಶಿನ)ವನ್ನು ಚೆಲ್ಲಿ ಆಕ್ರೋಶ ಹೊರಹಾಕಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts