ಅಪ್ರಾಪ್ತ ವಯಸ್ಕಳನ್ನು ಅತ್ಯಾಚಾರಗೈದು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಶೇರ್​ ಮಾಡಿದ ಭೋಜ್‌ಪುರಿ ಗಾಯಕನ ಬಂಧನ

bojapuri singer abhishek
Published on

ಗುರಗಾಂವ್: ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ಮತ್ತು ಆಕ್ಷೇಪಾರ್ಹ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಭೋಜ್‌ಪುರಿ ಗಾಯಕನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬಿಹಾರ ಮೂಲದ ಅಭಿಷೇಕ್(21) ಅಲಿಯಾಸ್ ಬಾಬುಲ್ ಬಿಹಾರಿ ಎಂದು ಗುರುತಿಸಲಾಗಿದೆ. ಆರೋಪಿಯು ಎರಡು ವರ್ಷಗಳ ಹಿಂದೆ ರಾಜೀವ್ ನಗರದಲ್ಲಿ ವಾಸಿಸುತ್ತಿದ್ದ 13 ವರ್ಷದ ಬಾಲಕಿ ಜತೆ ಸ್ನೇಹ ಬೆಳೆಸಿ, ಹೋಟೆಲ್ ಕರೆದೊಯ್ದು ಅತ್ಯಾಚಾರವೆಸಗಿ ಆಕೆಯನ್ನು ಚಿತ್ರಗಳನ್ನು ಸೆರೆ ಹಿಡಿದಿದ್ದ. ಘಟನೆಯ ನಂತರ ಬಾಲಕಿಯು ಆರೋಪಿಯಿಂದ ದೂರ ಉಳಿದಿದ್ದು, ಆತನ ಬಗ್ಗೆ ಯಾರಿಗೂ ಹೇಳಿರಲಿಲ್ಲ.

ಆದರೆ ಆರೋಪಿಯು ಕೆಲವು ದಿನಗಳ ಹಿಂದೆ ಬಾಲಕಿಯ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ. ಆ ಚಿತ್ರಗಳನ್ನು ನೋಡಿದ ನಂತರ ಸಂತ್ರಸ್ತೆಯ ಕುಟುಂಬದವರು ಬಾಲಕಿಯನ್ನು ಪ್ರಶ್ನಿಸಿದ ವೇಳೆ, ಘಟನೆಯ ಬಗ್ಗೆ ಬಾಲಕಿ ಮಾಹಿತಿ ನೀಡಿದ್ದಾಳೆ.

ಸಂತ್ರಸ್ತೆಯ ಕುಟುಂಬದವರ ದೂರಿನ ಮೇರೆಗೆ ಪೊಲೀಸರು ಗಾಯಕನನ್ನು ಬಂಧಿಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಯು ಭೋಜ್‌ಪುರಿ ಗಾಯಕ ಮತ್ತು ನಟ ಎಂದು ಹೇಳಿಕೊಂಡಿದ್ದು, ಯೂಟ್ಯೂಬ್ ಚಾನೆಲ್‌ನಲ್ಲಿ 27,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾನೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net