More

    ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಮುನ್ನ ಒಳಿತು- ಕೆಡುಕು ಯೋಚಿಸಿ: ರಾಮನಗರದಲ್ಲಿ ರೈತ ಸಂಘ, ಹಸಿರು ಸೇನೆ ಪ್ರತಿಭಟನೆ

    ರಾಮನಗರ: ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಸಂಘಟನೆಯ ಪದಾಧಿಕಾರಿಗಳು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.

    ಈ ವೇಳೆ ಮಾತನಾಡಿದ ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಮೊಗೇನಹಳ್ಳಿ ರಾಮು, ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು, ಕಾಯ್ದೆಯ ಕಲಂ 79 ಎಬಿಸಿ ಮತ್ತು 80ನ್ನು ತೆಗೆದು ಹಾಕಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿದೆ. ಕಂದಾಯ ಸಚಿವರು ಸುಗ್ರೀವಾಜ್ಞೆ ಮೂಲಕ ಈ ತಿದ್ದುಪಡಿಯನ್ನು ತರುವುದಾಗಿ ಹೇಳಿದ್ದಾರೆ. ಯಾವುದೇ ಕಾಯ್ದೆಗೆ ತಿದ್ದುಪಡಿ ತರುವುದಕ್ಕೂ ಮುನ್ನ ಸಾರ್ವಜನಿಕರಿಗೆ ಆಗುವ ಒಳಿತು ಕೆಡುಕಿನ ಬಗ್ಗೆ ಸರ್ಕಾರ ಗಮನ ಹರಿಸಬೇಕು. ಆದರೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಈ ಬಗ್ಗೆ ಗಮನ ಹರಿಸಿದಂತೆ ಕಾಣುತ್ತಿಲ್ಲ ಎಂದು ದೂರಿದರು.

    ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತ ಪರ ಹೋರಾಟದಿಂದ ಬಂದವರಾಗಿದ್ದಾರೆ. ರೈತರ ಹಿತಾಸಕ್ತಿ ಕಾಯುವುದಾಗಿ ಹೇಳುತ್ತಲೇ, ಈ ತಿದ್ದುಪಡಿ ಮಸೂದೆ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗೆ ಅವಕಾಶವನ್ನೂ ನೀಡದೆ, ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದ್ದಾರೆ ಎಂದು ಹೇಳಿದರು.

    ಬೀದಿಗೆ ಬೀಳಲಿದ್ದಾರೆ ಸಣ್ಣ ರೈತರು: ಈ ತಿದ್ದುಪಡಿಯಿಂದಾಗಿ ರಾಜ್ಯದಲ್ಲಿರುವ ಸಣ್ಣ ಹಿಡುವಳಿ ರೈತರ ಬದುಕು ಬೀದಿಗೆ ಬೀಳಲಿದೆ. ಇವರು ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ರೈತಾಪಿ ಸಂಸ್ಕೃತಿ ಸಂಪೂರ್ಣ ಮಾಯವಾಗಿ ಬಂಡವಾಳಶಾಹಿ ಕೃಷಿ ಸಂಸ್ಕೃತಿ ಬೆಳೆಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಹಾರ ಭದ್ರತೆಯ ಹಕ್ಕು ನಾಶವಾಗಲಿದೆ. ಆಹಾರಕ್ಕಾಗಿ ಭಿಕ್ಷೆ ಬೇಡುವ ಸ್ಥಿತಿ ನಿಮಾಣವಾಗುತ್ತದೆ. ಗ್ರಾಹಕರ ಮೇಲೂ ಹೊಡೆತ ಬೀಳುತ್ತದೆ. ಬಂಡವಾಳಶಾಹಿಗಳು ಕುಲಾಂತರಿ ಬೀಜಗಳ ಬಳಕೆ, ರಾಸಾಯನಿಕ ಕೃಷಿ, ಮಾನೋಕಲ್ಚರ್‌ಗೆ ಒತ್ತು ನೀಡಿ, ಇಡೀ ಪರಿಸರವೇ ನಾಶವಾಗುತ್ತದೆ ಎಂದು ಮೊಗೇನಹಳ್ಳಿ ರಾಮು ಕಳವಳ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts