More

    ಶ್ರೀರಂಗಪಟ್ಟಣದಲ್ಲಿ ಹೆದ್ದಾರಿ ಸಂಚಾರ ತಡೆ

    ಶ್ರೀರಂಗಪಟ್ಟಣ: ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡಿಸಿ ಪಟ್ಟಣದಲ್ಲಿ ಭೂಮಿ ತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಮಂಗಳವಾರ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

    ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ನಾಯಕ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಸಚಿವ ಶಿವಾನಂದ ಪಾಟೀಲ್ ಮೂಲಕ ಕೀಳುಮಟ್ಟದ ಹೇಳಿಕೆ ಕೊಡಿಸಿ ತನ್ನ ರೈತ ವಿರೋಧಿ ನೀತಿಯನ್ನು ಸಾಬೀತು ಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಚಿವ ಶಿವಾನಂದ ಪಾಟೀಲ್ ಅವರು ರೈತರು ಪರಿಹಾರಕ್ಕೆ ಬರಗಾಲವನ್ನೇ ಕಾದಿರುತ್ತಾರೆ, 5 ಲಕ್ಷ ರೂ. ಪರಿಹಾರಕ್ಕೆ ಆತ್ಮಹತ್ಯೆ ಬೇಕಾದರೂ ಮಾಡಿಕೊಳ್ಳುತ್ತಾರೆ ಎಂದು ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ. ಇವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
    ಜನ-ಜಾನುವಾರುಗಳ ಜೀವ ರಕ್ಷಣೆಗೆ ನಾಲೆಗಳಿಗೆ 2 ಅಡಿ ನೀರು ಹರಿಸಲೇಬೇಕು. ರೈತರ ಪ್ರತಿ ಎಕರೆಗೆ 50 ಸಾವಿರ ರೂ. ಬೆಳೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.

    ಭೂಮಿ ತಾಯಿ ಹೋರಾಟ ಸಮಿತಿ ಅಧ್ಯಕ್ಷ ಬಿ.ಸಿ.ಕೃಷ್ಣೇಗೌಡ, ಉಪಾಧ್ಯಕ್ಷ ಹನಿಯಂಬಾಡಿ ನಾಗರಾಜು, ಮೇಳಾಪುರ ಜಯರಾಮೇಗೌಡ, ಗಂಜಾಂ ಮರಿಯಪ್ಪ, ಪ್ರಧಾನಿ ಕಾರ್ಯದರ್ಶಿ ಎಂ.ವಿ.ಕೃಷ್ಣ, ದರ್ಶನ್, ಖಜಾಂಚಿ ಪುಟ್ಟಮಾದು, ಸಂಘಟನಾ ಕಾರ್ಯದರ್ಶಿ ಮಹಾಲಿಂಗು, ಶಿವರಾಜು, ರಾಮಚಂದ್ರು, ಮುಖಂಡರಾದ ಹೊಸೂರು ಶಿವಣ್ಣ, ಮಾರಸಿಂಗನಹಳ್ಳಿ ತಿಮ್ಮೇಗೌಡ, ಹೆಮ್ಮಿಗೆ ಕೃಷ್ಣ, ತಗ್ಗಳ್ಳಿ ಯಜಮಾನ್ ಮಹಾದೇವು ಇತರರು ಭಾಗಿಯಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts