More

    ದ.ಕ. ಜಿಲ್ಲೆಯ ಏಳು ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

    ಬೆಳ್ತಂಗಡಿ: ತಾಲೂಕು ಕೇಂದ್ರದ ಸಾರ್ವಜನಿಕ ಆಸ್ಪತ್ರೆಯಲ್ಲಿ 82 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಆಕ್ಸಿಜನ್ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ಶಿಲಾನ್ಯಾಸ ನೆರವೇರಿಸಿದರು.

    ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ದ.ಕ. ಜಿಲ್ಲೆಯ ಏಳು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲಾಗುವುದು. 82 ಲಕ್ಷ ರೂ. ವೆಚ್ಚದಲ್ಲಿ 500 ಚದರ ಅಡಿಯ ಹೊಸತಾದ ಕಟ್ಟಡದಲ್ಲಿ ಒಂದು ನಿಮಿಷದಲ್ಲಿ 390 ಲೀಟರ್ ಆಕ್ಸಿಜನ್ ಉತ್ಪಾದಿಸುವ ಪ್ಲಾಂಟ್ ನಿರ್ಮಾಣವಾಗಲಿದೆ. ಜೂನ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ಸೂಚಿಸಿದೆ. ಯಾವುದೇ ಸಂದರ್ಭ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗದಂತೆ ರಾಜ್ಯ ಸರ್ಕಾರ ಈ ವ್ಯವಸ್ಥೆ ಮಾಡುತ್ತಿದೆ ಎಂದರು.

    ಶಾಸಕ ಹರೀಶ್ ಪೂಂಜ ಮಾತನಾಡಿ, ಆದಷ್ಟು ಶೀಘ್ರ ರೋಗಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಆಕ್ಸಿಜನ್ ಘಟಕ ಸ್ಥಾಪನೆ ಮಾಡಿ ಲೋಕಾರ್ಪಣೆ ಮಾಡಲಾಗುವುದು ಎಂದರು.
    ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್ ಮತ್ತು ಕೆ.ಹರೀಶ್ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಸದಸ್ಯ ಶರತ್ ಕುಮಾರ್, ತಹಸೀಲ್ದಾರ್ ಮಹೇಶ್ ಜೆ., ತಾಪಂ ಇಒ ಕುಸುಮಾಧರ್, ತಾಲೂಕು ಆರೋಗ್ಯಾಧಿಕಾರಿ ಡಾ.ಕಲಾಮಧು, ತಾಲೂಕು ಆಸ್ಪತ್ರೆ ಆಡಳಿತ ವೈದಾಧಿಕಾರಿ ಡಾ.ವಿದ್ಯಾವತಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ, ತುಕಾರಾಮ್, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts