

ವಿಜಯವಾಣಿ ಸುದ್ದಿಜಾಲ ಉಡುಪಿ
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲ ಕೆರೆಗಳನ್ನೂ ಅಭಿವೃದ್ಧಿಪಡಿಸಿ ಅಂತರ್ಜಲ ಮಟ್ಟ ಕಾಯ್ದುಕೊಳ್ಳಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ನಂತರದ ದಿನಗಳಲ್ಲಿ ಕೆರೆಗಳ ಸುತ್ತ ವಾಕಿಂಗ್ ಟ್ರ್ಯಾಕ್ ಹಾಗೂ ಆಸನಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಯೋಜನೆ ರೂಪಿಸಲಾಗುವುದು ಎಂದು ಶಾಸಕ ಯಶ್ಪಾಲ್ ಸುವರ್ಣ ಭರವಸೆ ನೀಡಿದರು.
ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಉಪಾಧ್ಯೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಕಲ್ಮಾಡಿ, ಸ್ಥಳಿಯ ಪ್ರಮುಖರಾದ ನಾಗೇಶ್ ಹೆಗ್ಡೆ, ಸರ್ವಜ್ಞ ರಾವ್, ಮಂಜುನಾಥ ಹೆಬ್ಬಾರ್ ಹಾಗೂ ಬಿಜೆಪಿಯ ಕಾರ್ಯಕರ್ತರು ಉಪಸ್ಥಿತರಿದ್ದರು.