ಎರಡು ಅಂತಸ್ತಿನ ವಾಣಿಜ್ಯ ಮಳಿಗೆ ನಿರ್ಮಾಣ

blank

ಹೊನ್ನಾಳಿ: ಪಟ್ಟಣದ ತುಮ್ಮಿನಕಟ್ಟೆ ರಸ್ತೆಯಲ್ಲಿರುವ ತಾಲೂಕು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಸೇರಿದ ಪಶು ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ಅಗಲೀಕರಣದಿಂದ ಕಟ್ಟಡ ನೆಲಸಮವಾಗಿದ್ದು, ಅದೇ ಜಾಗದಲ್ಲಿ 72 * 45 ಅಳತೆಯ ನಿವೇಶನದಲ್ಲಿ ಎರಡು ಅಂತಸ್ತಿನ ವಾಣಿಜ್ಯ ಮಳಿಗೆ ನಿರ್ವಿುಸಲಾಗುವುದು ಎಂದು ಸಂಘದ ನಿರ್ದೇಶಕ ಮತ್ತು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

blank

ಭಾನುವಾರ ಕಟ್ಟಡ ನಿರ್ವಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ತುಮ್ಮಿನಕಟ್ಟೆ ರಸ್ತೆ ಅಗಲೀಕರಣದಿಂದ ಹಳೆಯದಾದ ಕಟ್ಟಡವನ್ನು ತೆರವುಗೊಳಿಸಿದ್ದು, ಇದೀಗ 1.34 ಕೋಟಿ ವೆಚ್ಚದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ವಿುಸಲಾಗುತ್ತಿದೆ ಎಂದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುರುಗೇಶ್ ಮಾತನಾಡಿ, ಕಟ್ಟಡ ಮತ್ತು ನಿವೇಶನ ತೆರವಿಗೆ ಪರಿಹಾರವಾಗಿ ಸಿಕ್ಕ ಹಣವನ್ನು ಕ್ರೋಡೀಕರಿಸಿ, ಬ್ಯಾಂಕಿನಿಂದ 32 ಲಕ್ಷ ರೂ. ಸಾಲ ಪಡೆದು ವಾಣಿಜ್ಯ ಮಳಿಗೆಗಳನ್ನು ನಿರ್ವಿುಸಲಾಗುತ್ತಿದೆ. ಶೀಘ್ರದಲ್ಲಿಯೇ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಎಚ್. ಬಸವರಾಜ್, ಉಪಾಧ್ಯಕ್ಷ ಎಚ್.ಡಿ. ಬಸವರಾಜಪ್ಪ ಬಸವನಹಳ್ಳಿ, ನಿರ್ದೇಶಕರಾದ ಡಿ. ಮಂಜುನಾಥ್, ಕೆ. ಚೇತನ್, ಎಚ್.ಸಿ. ಶೇಖರಪ್ಪ, ಎಂ.ಜಿ. ಹಾಲಪ್ಪ, ಬಸಮ್ಮ, ಎಚ್.ಜಿ. ಶಂಕರಮೂರ್ತಿ, ಕೆ.ಬಿ. ಸಿದ್ದನಗೌಡ, ನಾಗಮ್ಮ, ಅನಂತನಾಯ್ಕ, ರಾಜು ಸರಳಿನಮನೆ, ಎಂ.ಎಚ್. ಗಜೇಂದ್ರಪ್ಪ, ಎಚ್.ಸಿ. ಪ್ರಕಾಶ್, ಸಿಬ್ಬಂದಿ ಗೋಪಿನಾಥ್, ಸುರೇಶ್ ಇತರರರಿದ್ದರು.

Share This Article

ನರ ದೌರ್ಬಲ್ಯಕ್ಕೆ ನೆಲ್ಲಿಕಾಯಿಯೇ ರಾಮಬಾಣ! ಇದರ ಅನೇಕ ಪ್ರಯೋಜನಗಳ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರುತ್ತೆ | Gooseberry

Gooseberry : ಪ್ರಕೃತಿಯಲ್ಲಿ ಹಲವು ರೀತಿಯ ಔಷಧಿಗಳಿವೆ. ಅವು ನಮ್ಮ ಕಣ್ಣಿಗೆ ಗೋಚರಿಸುತ್ತಿದ್ದರೂ ಅವುಗಳಲ್ಲಿರುವ ವಿಶೇಷ…

ಕೊರಿಯನ್ನರು, ಚೀನಿಯರು, ಜಪಾನಿಯರು ರಾತ್ರಿ ಹೊತ್ತು ಸ್ನಾನ ಮಾಡೋದೇಕೆ?ಅಚ್ಚರಿಯ ಮಾಹಿತಿ ಇಲ್ಲಿದೆ..! Bathing

Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…

ಬೇಸಿಗೆಯಲ್ಲಿ ಮಾವಿನ ಹಣ್ಣು ತಿನ್ನಿ! ಅನಾರೋಗ್ಯ ದೂರ ಮಾಡಿ…Mango

ಬೆಂಗಳೂರು: ( Mango ) ಬೇಸಿಗೆಯಲ್ಲಿ  ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.…