More

    ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕನ ಬಂಧನ..

    ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ನಿಗಮದ ಪ್ರಧಾನ ವ್ಯವಸ್ಥಾಪಕನನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.

    ಮಹಾಲಕ್ಷ್ಮೀ ಬಡಾವಣೆಯಲ್ಲಿನ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಡಾ.ಬಿ.ಕೆ. ನಾಗರಾಜಪ್ಪ ಬಂಧಿತ ಆರೋಪಿ. ಭೋವಿ ಜನಾಂಗದ ಫಲಾನುಭವಿಗಳಿಗೆ ನೀಡಬೇಕಿದ್ದ ಅನುದಾನವನ್ನು ನಕಲಿ ದಾಖಲೆ ಸೃಷ್ಟಿಸಿ ಆಪ್ತರ ಹೆಸರಿನಲ್ಲಿ ಬ್ಯಾಂಕ್​ ಖಾತೆ ತೆರೆದು ಅವರ ಹೆಸರಿಗೆ ಹಣ ವರ್ಗಾವಣೆ ಮಾಡಿಕೊಂಡು ನಿಗಮಕ್ಕೆ ವಂಚನೆ ಮಾಡುತ್ತಿದ್ದರು ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.‘

    ಭೋವಿ ಜನಾಂಗಕ್ಕೆ ಬಳಸಬೇಕಿದ್ದ ಅನುದಾನವನ್ನು ದುರುಪಯೋಗ ಪಡಿಸಿಕೊಂಡ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಡಾ.ಬಿ.ಕೆ. ನಾಗರಾಜಪ್ಪ, 15 ಫಲಾನುಭವಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ತಲಾ 5 ಲಕ್ಷದಂತೆ 75 ಲಕ್ಷ ರೂ. ದೋಚಿದ್ದಾರೆ. ಫಲಾನುಭವಿಗಳ ಕಡೆಯಿಂದ ಸಹಿ ಮಾಡಿಕೊಂಡು ಆನಂತರ ನಕಲಿ ಬ್ಯಾಂಕ್​ ಖಾತೆಗೆ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದರು. ಅಲ್ಲದೆ, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣ ಸಹ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

    ‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!

    ಪ್ರಿಯಕರನ ಜತೆ ಸೇರಿ ಪತಿಯನ್ನು ಸುಟ್ಟು ಕೊಂದ ಪತ್ನಿ: ಆರೋಪಿಗಳಿಬ್ಬರ ಬಂಧನ

    ಭ್ರಷ್ಟಾಚಾರ ಆರೋಪಕ್ಕೀಡಾಗಿರುವ ಜಿಲ್ಲಾಧಿಕಾರಿ ಮಂಜುನಾಥ್ ಎತ್ತಂಗಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts