More

    ಸದಾಶಿವ ಆಯೋಗದ ವರದಿ ಜಾರಿ ಬೇಡ

    ದಾವಣಗೆರೆ : ಸದಾಶಿವ ಆಯೋಗದ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಜಿಲ್ಲಾ ಭೋವಿ ಸಮಾಜ ಒತ್ತಾಯಿಸಿದೆ.
    ನಗರದ ರಂಗ ಮಹಲ್‌ನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸಮಾಜದ ಮುಖಂಡರು ಈ ಬಗ್ಗೆ ತೀರ್ಮಾನ ತೆಗೆದುಕೊಂಡರು.
    ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ. ಕೂಡಲೇ ಆ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಲಾಯಿತು.
    ವರದಿಯನ್ನು ಶಿಫಾರಸು ಮಾಡುವ ಮುನ್ನ ಬಹಿರಂಗ ಗೊಳಿಸಬೇಕು. ಎಲ್ಲ ಸಮುದಾಯಗಳಿಗೂ ವರದಿಯ ಪ್ರತಿಯನ್ನು ನೀಡಬೇಕು ಎಂದು ಮುಖಂಡರು ಒತ್ತಾಯಿಸಿದರು.
    ಒಳಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿಯ ಅನುಷ್ಠಾನ ಮಾಡದಂತೆ ಒತ್ತಾಯಿಸಿ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಜ. 10ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದವರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಲಾಯಿತು.
    ಜ. 14ರಿಂದ ಫೆ. 14ರ ವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿದ್ಧರಾಮೇಶ್ವರ ಜಯಂತಿ ಆಯೋಜಿಸಬೇಕು. ಸದಾಶಿವ ಆಯೋಗದ ವರದಿಯನ್ನು ವಿರೋಧಿಸಲು ಜಯಂತಿಯನ್ನು ಶಕ್ತಿ ಪ್ರದರ್ಶನದ ವೇದಿಕೆಯಾಗಿಸಬೇಕು ಎಂದು ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ಎಚ್. ಜಯಣ್ಣ ಹೇಳಿದರು.
    ಆಯೋಗದ ವರದಿ ಅಸಾಂವಿಧಾನಿಕ, ಅವೈಜ್ಞಾನಿಕವಾಗಿದೆ. ಮೀಸಲಾತಿಯನ್ನು ಬಳಸಿಕೊಂಡು ಯಾವ ಸಮುದಾಯಗಳು ಎಷ್ಟು ಅಭಿವೃದ್ಧಿ ಆಗಿವೆ ಎಂಬುದರ ವರದಿ ನೀಡುವಂತೆ ಸರ್ಕಾರ ಸದಾಶಿವ ಆಯೋಗವನ್ನು ನೇಮಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts