

ಮಡಿಕೇರಿ: ನಗರದ ಹೊರವಲಯದಲ್ಲಿರುವ ಕರ್ಣಂಗೇರಿ ಬಳಿ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.
ಬಳಿಕ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ನೂತನವಾಗಿ ನಿರ್ಮಿಸಿರುವ ತಾಲೂಕು ಪಂಚಾಯತಿ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯದ ೧೯ ಕಡೆಗಳಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಹಾಗೆಯೇ ತಾಲ್ಲೂಕು ಪಂಚಾಯಿತಿ ಉತ್ತಮ ಕಟ್ಟಡ ನಿರ್ಮಾಣಕ್ಕೂ ಸರ್ಕಾರ ಒತ್ತು ನೀಡಿದೆ ಎಂದು ಹೇಳಿದರು.
ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಹೆಚ್ಚಿನ ಒತ್ತು ನೀಡಿದ್ದು, ಹಣ ಬಿಡುಗಡೆ ಮಾಡಿದೆ. ಗ್ರಾಮಗಳು ಅಭಿವೃದ್ಧಿಯಾದಲ್ಲಿ ಇಡೀ ರಾಷ್ಟ್ರ ಅಭಿವೃದ್ಧಿ ಎಂಬುದನ್ನು ಯಾರು ಸಹ ಮರೆಯುವಂತಿಲ್ಲ ಎಂದು ಸಚಿವರು ನುಡಿದರು.
ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಗ್ಯಾರಂಟಿ ಯೋಜನೆ ತಾಲ್ಲೂಕು ಘಟಕದ ಅಧ್ಯಕ್ಷರಾದ ಮಂದ್ರೀರ ಮೋಹನ್‌ದಾಸ್, ತಾ.ಪಂ.ಇಒ ಶೇಖರ್ ಇತರರು ಇದ್ದರು.