ನಿರ್ಮಾಪಕರ ಸಂಘದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

Producers Association - Final
Published on

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ನಿರ್ಮಾಪಕ ಮತ್ತು ಕೃಷಿ ಸಚಿವ ಬಿ.ಸಿ. ಪಾಟೀಲ್​, ನಟ-ನಿರ್ಮಾಪಕ ರವಿಚಂದ್ರನ್​, ನಟಿ ತಾರಾ, ಸಾ.ರಾ. ಗೋವಿಂದು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

ಮುನಿರತ್ನ ಅವರು ನಿರ್ಮಾಪಕರ ಸಂಘದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಕುಮಾರ ಪಾರ್ಕ್​​ನ ಗಾಂಧಿ ಭವನದ ಬಳಿ ಇರುವ ಜಾಗವನ್ನು ಸಂಘದ ವತಿಯಿಂದ ಖರೀದಿಸಿ, ಆ ಜಾಗದಲ್ಲಿ ಸಂಘಕ್ಕಾಗಿ ಒಂದು ಸ್ವಂತ ಕಟ್ಟಡವನ್ನು ಕಟ್ಟಿಸಬೇಕು ಎಂದು ಯೋಜನೆ ಹಾಕಿದ್ದರು. ಈ ಮಧ್ಯೆ, ಅವರ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಘದ ಕಟ್ಟಡವನ್ನು ಕಟ್ಟಿಸುವುದಕ್ಕೆ ಅವರಿಂದ ಸಾಧ್ಯವಾಗಲಿಲಲ್ಲ.

ಈಗ ಸಂಘದ ಅಧ್ಯಕ್ಷರಾಗಿರುವ ಪ್ರವೀಣ್ ಕುಮಾರ್​ ಅವರು ಕಟ್ಟಡ ನಿರ್ಮಾಣ ಮಾಡುವುದಕ್ಕೆ ಒಂದು ಸಮಿತಿಯೊಂದನ್ನು ಸ್ಥಾಪಿಸಿದ್ದು, ಆ ಸಮಿತಿಯ ನೇತೃತ್ವದಲ್ಲಿ ಕಟ್ಟಡ ನಿರ್ಮಾಣವಾಗಲಿದೆ, ನಿರ್ಮಾಣ ಕಾರ್ಯವು ಶೀಘ್ರದಲ್ಲೇ ಶುರುವಾಗಲಿದ್ದು, ಮುಂದಿನ ವರ್ಷದ ಅಂತ್ಯದ ಹೊತ್ತಿಗೆ ಕಟ್ಟಡ ನಿರ್ಮಾಣ ಪೂರ್ಣವಾಗಲಿದೆ ಎಂದು ಅಂದಾಜಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net