More

  ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ

  ಕೆ.ಆರ್.ಸಾಗರ: ಕೆ.ಆರ್.ಸಾಗರ ಗ್ರಾಮದಲ್ಲಿ ಸುಮಾರು 9 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಶಾಸಕ ರಮೇಶ ಬಂಡಿಸಿದ್ದೇಗೌಡ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.


  ಶಾಸಕರ ಅನುದಾನ, ಕಾವೇರಿ ನೀರಾವರಿ ನಿಗಮ, ಮುಡಾ ಅನುದಾನದಲ್ಲಿ ಗ್ರಾಮದ ವಿವಿಧೆಡೆಯಲ್ಲಿ ಡಾಂಬರ್ ರಸ್ತೆ, ಸಿ.ಸಿ.ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು.


  ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ, ಗ್ರಾಮದ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅತ್ಯಗತ್ಯವಾಗಿದೆ. ಗುಣಮಟ್ಟದ ಕೆಲಸವನ್ನು ಗುತ್ತಿಗೆದಾರರಿಂದ ಪಡೆದುಕೊಳ್ಳಿ ಎಂದರು.


  ಗ್ರಾಪಂ ಅಧ್ಯಕ್ಷೆ ಶ್ರುತಿ ಶ್ರೀನಿವಾಸ್, ಉಪಾಧ್ಯಕ್ಷ ರವಿಶಂಕರೇಗೌಡ, ಕಾ.ನೀ.ನಿಗಮ ಕಾರ್ಯಪಾಲಕ ಇಂಜಿನಿಯರ್ ಜಯಂತ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಬು, ಸಹಾಯಕ ಇಂಜಿನಿಯರ್ ಶ್ವೇತಾ, ಅಭಿಲಾಷ್, ಗ್ರಾಪಂ ಸದಸ್ಯರಾದ ದೇವರಾಜು, ರವಿಕುಮಾರ್, ಸುಧಾ, ಹೇಮಂತ್‌ಕುಮಾರ್, ಪಿಡಿಒ ಬಸವರಾಜು, ಗ್ರಾಮ ಆಡಳಿತಾಧಿಕಾರಿ ರಘು, ಗ್ರಾಪಂ ಮಾಜಿ ಅಧ್ಯಕ್ಷ ಎಂ.ಬಿ.ಕುಮಾರ್, ಗ್ರಾಪಂ ಮಾಜಿ ಸದಸ್ಯ ವೆಂಕಟೇಶ್ ಮತ್ತಿತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts