More

    ಗೋಣಿಕೊಪ್ಪ ಬಸ್ ನಿಲ್ದಾಣಕ್ಕೆ ಭೂಮಿಪೂಜೆ

    ಗೋಣಿಕೊಪ್ಪ : ದಕ್ಷಿಣ ಕೊಡಗಿನ ಪ್ರಮುಖ ವಾಣಿಜ್ಯ ನಗರಿಯಾಗಿ ಬೆಳೆಯುತ್ತಿರುವ ಗೋಣಿಕೊಪ್ಪಲಿನ ಜನರ ದಶಕದ ಕನಸು ನನಸಾಗುತ್ತಿದೆ. ಇಲ್ಲಿನ ನಿವಾಸಿಗಳ ಬಹುದಿನದ ಬೇಡಿಕೆಯಾದ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೆರವೇರಿದೆ.
    ದಶಕದ ಹಿಂದೆ ಅಂದಿನ ಪಂಚಾಯಿತಿ ಆಡಳಿತ ಮಂಡಳಿ ಶಿಥಿಲಾವಸ್ಥೆಯಲ್ಲಿದ್ದ ಬಸ್ ತಂಗುದಾಣವನ್ನು ಕೆಡವಿ ನೂತನ ಬಸ್ ತಂಗುದಾಣ ನಿರ್ಮಾಣಕ್ಕೆ ಯೋಜನೆ ರೂಪಿಸಿತ್ತು. ಆದರೆ ಅದು ಇಂದಿನವರೆಗೂ ನನೆಗುದಿಗೆ ಬಿದ್ದಿತ್ತು. ಮುಖ್ಯ ರಸ್ತೆಯಲ್ಲಿಯೇ ಮೈಸೂರು, ಬೆಂಗಳೂರು, ಹಾಸನಕ್ಕೆ ತೆರಳುವ ಬಸ್‌ಗಳು ಸ್ವಲ್ಪ ಸಮಯ ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತಿದ್ದವು. ಗಾಳಿ-ಮಳೆ, ಬಿಸಿಲಿಗೆ ಪ್ರಯಾಣಿಕರು ರಸ್ತೆ ಬದಿಯಲ್ಲಿ ನಿಂತು ಬಸ್‌ಗಾಗಿ ಕಾಯುವ ಪರಿಸ್ಥಿತಿಯಿತ್ತು.
    ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸ್ಥಾಪಿಸಬೇಕೆಂದು ಈ ಭಾಗದ ಜನರು ಹಲವು ವರ್ಷಗಳಿಂದ ಒತ್ತಾಯ ಮಾಡಿದ್ದರೂ ಜಾಗದ ಕೊರತೆಯ ನೆಪವೊಡ್ಡಿ ಅದು ಕಾರ್ಯಗತವಾಗಿರಲಿಲ್ಲ. ಇದೀಗ ಶಾಸಕ ಎ.ಎಸ್ ಪೊನ್ನಣ್ಣ ಅವರ ಮುತುವರ್ಜಿಯಿಂದ 2 ಕೋಟಿ ರೂ. ವೆಚ್ಚದ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಮಾಡಲಾಯಿತು.

    ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಎಂ.ಮಂಜುಳಾ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ವೆಂಕಟ್‌ರಾಜ, ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ತೀತಿರ ಧರ್ಮಜ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಪ್ರಧಾನ ಕಾರ್ಯದರ್ಶಿ ಎ.ಜೆ.ಬಾಬು ಬಿ.ಶೆಟ್ಟಿಗೇರಿ ಗ್ರಾ.ಪಂ.ಅಧ್ಯಕ್ಷ ಕೊಲ್ಲಿರ ಬೋಪಣ್ಣ, ಕಾಂಗ್ರೆಸ್ ಪಕ್ಷದ ಮುಖಂಡರಾದ ಪಿ.ಕೆ.ಪೊನ್ನಪ್ಪ, ತನ್ನಿರ ಮೈನಾ, ಪಿ.ಕೆ.ಪ್ರವೀಣ್, ಕೆ.ಎಂ.ಅಜಿತ್ ಅಯ್ಯಪ್ಪ, ಪಲ್ವೀನ್ ಪೂಣಚ್ಚ, ಆಲೀರ ಶಾದಲಿ, ಗ್ರಾಮ ಪಂಚಾಯತಿ ಸದಸ್ಯರು, ಪಿಡಿಒ ತಿಮ್ಮಯ್ಯ, ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts