More

    ಪ್ರಾಮಾಣಿಕ ಸೇವೆ ಜನಪ್ರತಿನಿಧಿ ಹೊಣೆ ; ಪೌರಾಡಳಿತ ಹಾಗೂ ಸಕ್ಕರೆ ಖಾತೆ ಸಚಿವ ಎಂಟಿಬಿ ನಾಗರಾಜ್ ಅಭಿಮತ

    ಬೆಂಗಳೂರು ಗ್ರಾಮಾಂತರ : ಸಾರ್ವಜನಿಕರು ಕೊಟ್ಟ ಅಧಿಕಾರ, ಜನತೆ ಸರ್ಕಾರಕ್ಕೆ ಕಟ್ಟುವ ತೆರಿಗೆ ಎರಡೂ ಮಹತ್ವದ್ದಾಗಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಜನಸೇವೆ ಮಾಡುವುದು ಪ್ರತಿ ಜನಪ್ರತಿನಿಧಿಯ ಹೊಣೆ ಎಂದು ಪೌರಾಡಳಿತ ಹಾಗೂ ಸಕ್ಕರೆ ಖಾತೆ ಸಚಿವ ಎಂಟಿಬಿ ನಾಗರಾಜ್ ಹೇಳಿದರು.

    ಅನಗೊಂಡನಹಳ್ಳಿ ಹೋಬಳಿಯ ಮೂರು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ರಾಜಕಾರಣದಲ್ಲಿ ಪ್ರಾಮಾಣಿಕತೆ ಕಣ್ಮರೆಯಾಗುತ್ತಿರುವುದು ಬೇಸರದ ಸಂಗತಿ. ಜನರು ನಂಬಿಕೆಯಿಟ್ಟು ನೀಡಿದ ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಾರದು ಎಂದರು.

    ಸರ್ಕಾರಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಕೆಲಸವಾಗಬೇಕು. ಈ ವಿಷಯದಲ್ಲಿ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಸರ್ಕಾರದ ಯೋಜನೆಗಳು ಸಾಕಾರಗೊಳ್ಳುತ್ತವೆ ಎಂದು ಹೇಳಿದರು. ಪ್ರತಿ ಗ್ರಾಮದಲ್ಲೂ ಅಂಬೇಡ್ಕರ್ ಜಯಂತಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮದಿನವನ್ನು ಏ.14 ರಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಅದೇ ರೀತಿ ಹೊಸಕೋಟೆ ತಾಲೂಕಿನ ಪ್ರತಿ ಗ್ರಾಮಗಳಲ್ಲೂ ಅಂಬೇಡ್ಕರ್ ಜಯಂತಿ ಆಚರಿಸುವ ಮೂಲಕ ಸಂವಿಧಾನ ಶಿಲ್ಪಿಗೆ ಗೌರವ ನಮನ ಅರ್ಪಿಸಬೇಕಿದೆ ಎಂದು ಸಚಿವ ಎಂಟಿಬಿ ನಾಗರಾಜ್ ಕರೆ ನೀಡಿದರು.

    ಜಾತ್ಯಾತೀತ ತತ್ವದಡಿ ಮಾನವೀಯ ಮೌಲ್ಯಗಳ ಆಧಾರದ ಮೇಲೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ನೀತಿಯ ಮೇಲೆ ಅಂಬೇಡ್ಕರ್ ಅವರು ಸಂವಿಧಾನ ರಚಿಸಿ ಭಾರತಾಂಬೆ ಮಡಿಲಿಗೆ ಅರ್ಪಿಸಿದ್ದಾರೆ. ಅಂಥ ಮಹನೀಯರ ಜಯಂತಿಯಂದು ಪ್ರತಿ ಭಾರತೀಯನೂ ಜಾತ್ಯಾತೀತವಾಗಿ ನುಡಿನಮನ ಸಲ್ಲಿಸಬೇಕಿದೆ ಎಂದರು.

    ಕರೊನಾ ಓಡಿಸಲು ಕೈಜೋಡಿಸಿ : ವಿಶ್ವವನ್ನೇ ಕಾಡುತ್ತಿರುವ ಮಹಾಮಾರಿ ಕರೊನಾ ಓಡಿಸಲು ಸರ್ಕಾರಗಳೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಎಂಟಿಬಿ ಕರೆ ನೀಡಿದರು. ಕರೊನಾ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ. ಇದರೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದರು. ಗಣಗಲೂರು, ಬಾಗೂರು, ತತ್ತನೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಯಿತು.

    ಬಲಿದಾನದಿಂದ ಸ್ವಾತಂತ್ರ್ಯ : 200 ವರ್ಷಗಳ ಕಾಲ ಬ್ರಿಟೀಷರ ದಾಸ್ಯದಲ್ಲಿದ್ದ ಭಾರತವನ್ನು ಸ್ವಾತಂತ್ರ್ಯಗೊಳಿಸುವಲ್ಲಿ ಮಹಾತ್ಮಾಗಾಂಧಿ ಸೇರಿ ಅನೇಕ ಮಹನೀಯರು ತ್ಯಾಗ ಬಲಿದಾನ ಮಾಡಿದ್ದಾರೆ. ಅಂಥ ಮಹನೀಯರ ಬಲಿದಾನದ ಫಲವಾಗಿ ನಾವೆಲ್ಲ ಸರ್ವ ಸ್ವತಂತ್ರ ದೇಶದ ಪ್ರಜೆಗಳಾಗಿದ್ದೇವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts