More

    ಜಿಲ್ಲೆಯಲ್ಲಿ ಗುಣಮಟ್ಟದ ಹಾಲಿಗೆ ಹೊಸಕೋಟೆ ಪ್ರಥಮ : ಶಾಸಕ ಶರತ್ ಬಚ್ಚೇಗೌಡ ಸಂತಸ

    ಹೊಸಕೋಟೆ : ಹೈನುಗಾರಿಕೆಯಲ್ಲಿ ಹೊಸಕೋಟೆ ತಾಲೂಕು ಅಗ್ರಸ್ಥಾನದಲ್ಲಿದೆ. ಗುಣಮಟ್ಟದ ಜತೆ ಅತಿ ಹೆಚ್ಚು ಹಾಲು ಪೂರೈಕೆ ಮಾಡುವ ತಾಲೂಕಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹರ್ಷ ವ್ಯಕ್ತಪಡಿಸಿದರು.

    ತಾಲೂಕಿನ ಜಡಗೇನಹಳ್ಳಿ ಹೋಬಳಿಯ ಖಾಜಿ ಹೊಸಹಳ್ಳಿಯಲ್ಲಿ ಅಂದಾಜು 35 ಲಕ್ಷ ರೂ. ವೆಚ್ಚದ ಪಶುಚಿಕಿತ್ಸಾ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.  ಕಳೆದೊಂದು ವರ್ಷದಲ್ಲಿ 3ನೇ ಪಶುಚಿಕಿತ್ಸಾ ಕೇಂದ್ರದ ನಿರ್ವಣಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಭಾಗದಲ್ಲಿ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ಸುಸಜ್ಜಿತ ಪಶುಚಿಕಿತ್ಸಾ ಕೇಂದ್ರ ನಿರ್ಮಾಣ ಪೂರ್ಣವಾಗಲಿದೆ ಎಂದರು.

    ಜಿಪಂ ಅಧ್ಯಕ್ಷರ ಸಹಕಾರದೊಂದಿಗೆ ಹೆಚ್ಚಿನ ಅನುದಾನಗಳನ್ನು ತಂದು ತಾಲೂಕಿನ ಜನತೆಗೆ ಅವಶ್ಯಕತೆ ಇರುವ ಎಲ್ಲ್ಲ ಮೂಲಸೌಕರ್ಯ ಒದಗಿಸುವುದಾಗಿ ಭರವಸೆ ನೀಡಿದರು. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದರಿಂದ ಗ್ರಾಮಗಳ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದರು.

    ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಮಾತನಾಡಿ, ಎರಡನೇ ಬಾರಿಗೆ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಲು ಕಾಂಗ್ರೆಸ್ ಮತ್ತು ಶಾಸಕ ಶರತ್ ಬಚ್ಚೇಗೌಡ ಅವರು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಹಿಂದೆ 30 ತಿಂಗಳು ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಈ ಬಾರಿ ಕಾಲಾವಕಾಶ ಬಹಳ ಕಡಿಮೆ ಇದ್ದರೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಾಮಗಾರಿಗಳ ವೇಗ ಹೆಚ್ಚಿಸಲಾಗುವುದು ಎಂದು ಹೇಳಿದರು.

    ಜಿಲ್ಲಾ ಪಂಚಾಯಿತಿ ಅಂದಾಜು 3-4 ಕೋಟಿ ರೂ. ಪೂರ್ತಿ ಖರ್ಚಾಗದೆ ಸರ್ಕಾರಕ್ಕೆ ವಾಪಾಸ್ ಹೋಗಿದೆ. ಆದ್ದರಿಂದ ಈಗ ಕ್ರಿಯಾ ಯೋಜನೆಯಲ್ಲಿ ಇರುವ ಎಲ್ಲ ಕಾರ್ಯಕ್ರಮಗಳಿಗೆ ಮೊದಲ ಆದ್ಯತೆ ನೀಡಿ ಪೂರ್ಣಗೊಳಿಸಲಾಗುವುದು. ಈ ಬಾರಿಯ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಎಲ್ಲೂ ನೀರಿನ ಅಭಾವ ಬಾರದಂತೆ ನಿರ್ವಹಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.ಟಿಎಪಿಸಿಎಂಎಸ್ ನಿರ್ದೇಶಕ ಸಿ. ಮುನಿಯಪ್ಪ, ಮುಖಂಡರಾದ ಕೋಡಿಹಳ್ಳಿ ಸುರೇಶ್, ರಾಮಚಂದ್ರಪ್ಪ, ಶಿವಕುಮಾರ್, ಪಶು ವೈದ್ಯ ಡಾ. ಮಂಜುನಾಥ್ ಮತ್ತಿತರರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts