ಗುಜರಾತ್​ ಸಿಎಂ ಸ್ಥಾನಕ್ಕೆ ಭೂಪೇಂದ್ರ ಪಟೇಲ್​ ಆಯ್ಕೆ: ಡಿ.12ರಂದು ಪದಗ್ರಹಣ

bhupendra patel
Published on

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಭೂಪೇಂದ್ರ ಪಟೇಲ್​ಗೆ ಮತ್ತೊಮ್ಮೆ ಸಿಎಂ ಆಗುವ ಅವಕಾಶ ಒಲಿದಿದೆ.

ಡಿ.12ರಂದು ಅಹಮದಬಾದ್​ನ ಮೋದಿ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಗುಜರಾತ್​ನಲ್ಲಿ ಸತತ 7ನೇ ಬಾರಿಯೂ ಬಿಜೆಪಿ ಗೆಲುವು ಸಾಧಿಸಿದ್ದು, ಈ ಗೆಲುವಿಗೆ ಬಿಜೆಪಿ ಕಾರ್ಯಕರ್ತರೇ ಕಾರಣ ಎಂದು ಭೂಪೇಂದ್ರ ಪಟೇಲ್​ ಸಂತಸ ಹಂಚಿಕೊಂಡಿದ್ದಾರೆ. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಭೆ ಕರೆದಿದ್ದಾರೆ.

ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ. ಅವರ ಅಸಾಧಾರಣ ಪರಿಶ್ರಮವೇ ಈ ಐತಿಹಾಸಿಕ ಗೆಲುವಿಗೆ ಕಾರಣ. ಅಭಿವೃದ್ಧಿಗೆ ಗುಜರಾತಿಗರು ಮನ್ನಣೆ ನೀಡಿದ್ದಾರೆ. ನಮ್ಮನ್ನು ಆಶೀರ್ವದಿಸಿದ ಗುಜರಾತಿಗರಿಗೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಧನ್ಯವಾದ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net